ಬ್ರೇಕಿಂಗ್ ನ್ಯೂಸ್
03-07-26 01:21 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 3: ಕಲ್ಯಾಣ ಮಂಟಪ ಒಂದರಲ್ಲಿ ಮತದಾರರನ್ನು ಸೇರಿಸಿ ಎಸ್ಐಆರ್ ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ(ಬಿಎಲ್ಓ) ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ರಾಮನಗರ ಜಿಲ್ಲಾಧಿಕಾರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅನ್ಬುಕುಮಾರ್, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸದ್ಯ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮ ನಡೆಯುತ್ತಿದೆ. ನಿಯಮಗಳ ಪ್ರಕಾರ, ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ನಡೆಸಬೇಕು ಹಾಗೂ ನಿಗದಿತ ಅರ್ಜಿಗಳನ್ನು ವಿತರಿಸಬೇಕು. ಆದರೆ ರಾಮನಗರ ನಗರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 23ರ ಟಿಪ್ಪು ನಗರದ ಕಲ್ಯಾಣ ಮಂಟಪವೊಂದರಲ್ಲಿ ಬಿಎಲ್‌ಒಗಳು ಮನೆ ಮನೆಗೆ ಹೋಗುವ ಬದಲು, ಜನರನ್ನು ಒಂದೇ ಕಡೆ ಸೇರಿಸಿ ‘ಎಸ್‌ಐಆರ್ ಕ್ಯಾಂಪ್’ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಲ್ಲದೆ, ರಾಮನಗರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮೂಲದವರಿದ್ದು ಅವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ನಿಯಮ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಕ್ಯಾಂಪ್ ನಡೆಸಿದ ಅಧಿಕಾರಿಗಳನ್ನು ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು. ತನಿಖೆಯ ಸಂಪೂರ್ಣ ವರದಿಯನ್ನು ವಿಳಂಬವಿಲ್ಲದೆ ತಮಗೆ ಸಲ್ಲಿಸಬೇಕು ಎಂದು ಡಿಸಿಗೆ ಆದೇಶಿಸಿದ್ದಾರೆ. ನಿಯಮ ಉಲ್ಲಂಘನೆ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆಯೋಗದ ಮೂಲಗಳು ತಿಳಿಸಿವೆ.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm