ಬ್ರೇಕಿಂಗ್ ನ್ಯೂಸ್
07-07-26 10:52 am HK News Staffer ಕರ್ನಾಟಕ
ಸುಳ್ಯ, ಜುಲೈ 7: ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದಾದ್ಯಂತ ಸಾವಿರಾರು ಗ್ರಾಮೀಣ ಜನರ ಬದುಕಿಗೆ ಹೊಸ ದಾರಿ ತೆರೆದಿದ್ದ, ‘ಭಾರತದ ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಜ್ (76) ಅವರು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸುಳ್ಯದ ಕೆವಿಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಅವರ ಅಗಲಿಕೆ ಗ್ರಾಮೀಣ ಭಾರತಕ್ಕೆ ಅಪಾರ ನಷ್ಟವಾಗಿದೆ.
ಕೆಲವು ದಿನಗಳ ಹಿಂದೆ ಉತ್ತರಾಖಂಡದ ದೇವಾಲಯಗಳಿಗೆ ಭೇಟಿ ನೀಡಿ ಮರಳಿದ್ದ ಡಾ. ಭಾರದ್ವಜ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿದ್ದ ಗಿರೀಶ್ ಭಾರದ್ವಜ್ ಅವರಿಗೆ ದೊಡ್ಡ ದೊಡ್ಡ ಕಂಪನಿಗಳಲ್ಲಿ ಆಕರ್ಷಕ ಉದ್ಯೋಗದ ಅವಕಾಶಗಳಿದ್ದರೂ, ಅದನ್ನು ತಿರಸ್ಕರಿಸಿ ಗ್ರಾಮೀಣ ಜನರ ಬದುಕನ್ನು ಸುಧಾರಿಸುವ ಗುರಿಯೊಂದಿಗೆ ವಿಭಿನ್ನ ಹಾದಿ ಹಿಡಿದಿದ್ದರು. ಸುಳ್ಯದಲ್ಲೇ ತಂದೆಯೊಂದಿಗೆ ಸಣ್ಣ ವರ್ಕ್‌ಶಾಪ್ ಆರಂಭಿಸಿದ ಅವರು, ತಮ್ಮ ತಾಂತ್ರಿಕ ಜ್ಞಾನವನ್ನು ಸಮಾಜದ ಸೇವೆಗೆ ಮೀಸಲಿಟ್ಟರು.
ಮಳೆಗಾಲದಲ್ಲಿ ನದಿ, ಹಳ್ಳ-ಕೊಳ್ಳಗಳಿಂದ ಸಂಪರ್ಕ ಕಡಿತಗೊಂಡು ಶಾಲೆ, ಆಸ್ಪತ್ರೆ, ಮಾರುಕಟ್ಟೆ ತಲುಪಲು ಪರದಾಡುತ್ತಿದ್ದ ಗ್ರಾಮೀಣ ಜನರ ಸಂಕಷ್ಟವೇ ಅವರ ಬದುಕಿನ ದಿಕ್ಕನ್ನೇ ಬದಲಿಸಿತು. 1989ರಲ್ಲಿ ಸುಳ್ಯ ತಾಲ್ಲೂಕಿನ ಅರಂಬೂರಿನ ಪಯಸ್ವಿನಿ ನದಿಗೆ ನಿರ್ಮಿಸಿದ ಮೊದಲ ತೂಗುಸೇತುವೆ ಅವರ ಜೀವನದ ಮಹತ್ವದ ಮೈಲಿಗಲ್ಲಾಯಿತು. ಸ್ಥಳೀಯ ಸಾಮಗ್ರಿಗಳನ್ನು ಬಳಸಿಕೊಂಡು ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಿಸಿದ ಈ ಸೇತುವೆ ಯಶಸ್ವಿಯಾದ ಬಳಿಕ ದೇಶದ ವಿವಿಧ ರಾಜ್ಯಗಳಿಂದ ಅವರಿಗೆ ಆಹ್ವಾನಗಳು ಹರಿದು ಬಂದವು.
ಅಲ್ಲಿಂದ ಆರಂಭವಾದ ಅವರ ಸೇವಾಯಾತ್ರೆ ಕರ್ನಾಟಕದ ಗಡಿಗಳನ್ನು ದಾಟಿ ಕೇರಳ, ಆಂಧ್ರಪ್ರದೇಶ, ಒಡಿಶಾ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿತು. ತಮ್ಮ ಜೀವನದಲ್ಲಿ 300ಕ್ಕೂ ಹೆಚ್ಚು ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ನೂರಾರು ಹಳ್ಳಿಗಳಿಗೆ ಶಾಶ್ವತ ಸಂಪರ್ಕ ಕಲ್ಪಿಸಿದ ಸಾಧನೆ ಅವರದ್ದು. ಸರ್ಕಾರಿ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ವೆಚ್ಚವಾಗುವ ಸ್ಥಳಗಳಲ್ಲಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಸೇತುವೆಗಳನ್ನು ನಿರ್ಮಿಸಿ ಅವರು ತಾಂತ್ರಿಕ ಕ್ರಾಂತಿಯನ್ನೇ ಸೃಷ್ಟಿಸಿದ್ದರು.
ಅವರ ವಿಶಿಷ್ಟ ಸೇವೆಯನ್ನು ಗುರುತಿಸಿ 2017ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಬಳಿಕ ದೇಶಾದ್ಯಂತ ಅವರು ‘ಬ್ರಿಡ್ಜ್ ಮ್ಯಾನ್’, ‘ತೂಗುಸೇತುವೆಗಳ ಸರದಾರ’ ಎಂಬ ಹೆಸರಿನಿಂದಲೇ ಪರಿಚಿತರಾದರು.
ಡಾ. ಗಿರೀಶ್ ಭಾರದ್ವಜ್ ಕೇವಲ ಸೇತುವೆಗಳನ್ನು ಕಟ್ಟಲಿಲ್ಲ ಸಂಪರ್ಕವಿಲ್ಲದೆ ಬದುಕುತ್ತಿದ್ದ ಗ್ರಾಮಗಳನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ಸೇರಿಸುವ ಕೆಲಸ ಮಾಡಿದರು. ಸಾವಿರಾರು ವಿದ್ಯಾರ್ಥಿಗಳು, ರೈತರು ಮತ್ತು ಗ್ರಾಮೀಣ ಕುಟುಂಬಗಳ ಜೀವನದಲ್ಲಿ ಆಶಾಕಿರಣವಾಗಿ ಉಳಿದಿದ್ದ ಅವರ ಅಗಲಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
'ತೂಗುಸೇತುವೆಗಳ ಸರದಾರ', ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನದ ಸುದ್ದಿ ತೀವ್ರ ಬೇಸರ ತಂದಿದೆ. ಅವರ ಅಗಲಿಕೆಯಿಂದ ರಾಜ್ಯವು ಅಪರೂಪದ ತಾಂತ್ರಿಕ ಸಾಧಕನೊಬ್ಬನನ್ನು ಕಳೆದುಕೊಂಡಂತಾಗಿದೆ. ದೇಶದಾದ್ಯಂತ 140ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ್ದ ಗಿರೀಶ್ ಭಾರದ್ವಾಜ್ ಅವರು, ಕಡಿದಾದ ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ ಜನರ ಬದುಕನ್ನು ಸುಗಮಗೊಳಿಸಿದ್ದರು. ಇವರ ಈ ನಿಸ್ವಾರ್ಥ ತಂತ್ರಜ್ಞಾನ ಸೇವೆಗೆ ಮನಸೋತ ಗ್ರಾಮಸ್ಥರು ಇವರನ್ನು ಪ್ರೀತಿಯಿಂದ 'ಸುಳ್ಯದ ವಿಶ್ವೇಶ್ವರಯ್ಯ' ಎಂದೇ ಕರೆಯುತ್ತಿದ್ದರು. ಡಾ. ಗಿರೀಶ್ ಭಾರದ್ವಾಜ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm