ಬ್ರೇಕಿಂಗ್ ನ್ಯೂಸ್
08-07-26 02:06 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 08: ಆರ್ ಎಸ್ ಎಸ್ ಸಂಘಟನೆ ಬೆಳಗಾವಿಯಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಬೇಕಿಲ್ಲ. ಅದು ಖಾಸಗಿ ಕಾರ್ಯಕ್ರಮ, ಆದರೆ ಬೀದಿಗಿಳಿದರೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, "ಕಾರ್ಯಕ್ರಮ ನಡೆಯಲಿ. ಅದು ಯಾವುದೇ ಖಾಸಗಿ ಕಾರ್ಯಕ್ರಮಕ್ಕೆ ನಮ್ಮ ಅನುಮತಿ ಬೇಕಾಗಿಲ್ಲಾ. ಆದರೆ ಬೀದಿಗಿಳಿದ್ರೆ ಅನುಮತಿ ಬೇಕಾಗುತ್ತದೆ" ಎಂದರು.
ಯಾವುದೇ ಸಂಘಟನೆಯಿಂದ ದೊಡ್ಡ ಮೆರವಣಿಗೆ ಮಾಡಬೇಕಾದ್ರೆ ಅನುಮತಿ ಬೇಕಲ್ವಾ? ಬೀದಿಗಿಳಿದ್ರೆ ಅನುಮತಿ ಕೇಳೇ ಕೇಳ್ತಾರೆ. ಕಾನೂನು ಸುವ್ಯವಸ್ಥೆ ವಾತಾವರಣ ಸರಿ ಇದ್ರೆ ಅನುಮತಿ ಕೊಡುತ್ತೇವೆ. ಇಲ್ಲಾ ಅಂದ್ರೆ ಮುಂದೂಡಿ ಅಂತಾ ಹೇಳುತ್ತೇವೆ ಎಂದರು.
ದೇಶಾದ್ಯಂತ ಇರುವ ಹಿರಿಯ ಆರ್.ಎಸ್.ಎಸ್. ಪ್ರಚಾರಕರು ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ದೇಶಾದ್ಯಂತ ನಡೆಯುವ ಜನಗಣತಿ ಪ್ರಕ್ರಿಯೆ, ರಾಮನ ದೇಣಿಗೆ ವಿವಾದ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಜುಲೈ 10ರಂದು ಸಭೆ ಆರಂಭಗೊಳ್ಳಲಿದ್ದು 12ರಂದು ಮುಕ್ತಾಯವಾಗಲಿದೆ. ಮೂರು ದಿನಗಳ ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಪರಾಮರ್ಶೆ ನಡೆಯಲಿದೆ. ಅಷ್ಟೇ ಅಲ್ಲದೆ, ಸಂಘಟನೆಯ ವ್ಯಾಪ್ತಿಯನ್ನು ವಿಸ್ತರಿಸಲು ಶಾಖೆಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತಿದ ವಿಚಾರದ ಬಗ್ಗೆಯೂ ವಿಮರ್ಶೆ ನಡೆಯುವ ಸಾಧ್ಯತೆ ಇದೆ.
ನಾನು ಇರೋವರೆಗೂ ಅನುಮತಿ ಕಡ್ಡಾಯ !
ಮಂಗಳವಾರ ಕಲಬುರ್ಗಿಯಲ್ಲಿ ಮಾತನಾಡಿದ್ದ ಖರ್ಗೆ, ನಾನು ಗೃಹಸಚಿವನಾಗಿ ಇರುವ ವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ ಎಂದು ಹೇಳಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm