ಬ್ರೇಕಿಂಗ್ ನ್ಯೂಸ್
19-07-26 08:34 pm HK News Desk ಕರ್ನಾಟಕ
ಬೆಂಗಳೂರು, ಜುಲೈ 19: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ವೇಗ ಸಿಕ್ಕಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಈ ವಾರದ ಕೊನೆಗೆ, ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಬಳಿಕ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ ಬೀಳ್ಕೊಟ್ಟಿದ್ದರು. ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ವರಿಷ್ಠ ನಾಯಕರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದರು. ಈ ವೇಳೆ, ರಾಹುಲ್ ಗಾಂಧಿ ಹೆಚ್ಚಿನ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಸಲಹೆಯಂತೆ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ಪರವಾಗಿದ್ದಾರೆ. ರಾಯಚೂರು ಉತ್ತರ ಶಾಸಕ ಬಸನಗೌಡ ದದ್ದಲ್, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಎ.ಆರ್. ಕೃಷ್ಣಮೂರ್ತಿ, ದಕ್ಷಿಣ ಕನ್ನಡದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ರಾಯಚೂರಿನ ಎಂಎಲ್‌ಸಿ ಎ. ವಸಂತಕುಮಾರ್ ಅವರ ಹೆಸರುಗಳನ್ಹು ಖರ್ಗೆ ತಮ್ಮ ಪಟ್ಟಿಯಲ್ಲಿ ಮುಂದಿರಿಸಿದ್ದಾರೆ.
ಮತ್ತೊಂದೆಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅಥಣಿ ಶಾಸಕ ಲಕ್ಷ್ಮಣ ಸವದಿ, ಆನೇಕಲ್ ಶಾಸಕ ಶಿವಣ್ಣ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ, ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹಾಗೂ ವಿಧಾನ ಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಅವರ ಹೆಸರನ್ನು ಮುಂದಿರಿಸಿದ್ದಾರೆ ಎನ್ನಲಾಗಿದೆ.
ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಸಚಿವ ಸ್ಥಾನ ಸಿಗದಿದ್ದರೆ, ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ನಾಯಕರಿಗೆ ಸಚಿವ ಸ್ಥಾನ ಕಲ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಟಿ. ನರಸೀಪುರ ಶಾಸಕ ಡಾ.ಎಚ್.ಸಿ. ಮಹದೇವಪ್ಪ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಕಲಘಟಗಿ ಶಾಸಕ ಸಂತೋಷ್ ಲಾಡ್, ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್, ಯಲಬುರ್ಗ ಶಾಸಕ ಬಸವರಾಜ ರಾಯರೆಡ್ಡಿ, ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ರಾಮದುರ್ಗ ಶಾಸಕ ಅಶೋಕ್ ಎಂ. ಪಟ್ಟಣ, ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಸರುಗಳನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದಲ್ಲದೆ, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್, ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಮಾಜಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಹಾಗೂ ಟಿ.ಬಿ. ಜಯಚಂದ್ರ ಅವರು ತಮ್ಮ ಆಡಳಿತ ಅನುಭವವನ್ನು ಪರಿಗಣಿಸಿ ಮತ್ತೊಮ್ಮೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೆಸರೂ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಜೊತೆಗೆ ಕೆಪಿಸಿಸಿ ನೆಲೆಯಲ್ಲಿ ತಮ್ಮ ಬೆಂಬಲಿಗರ ಹೆಸರುಗಳನ್ನೂ ಅವರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು, ಪಕ್ಷದ ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ನಡೆಸಿರುವ ಸಮೀಕ್ಷೆಯ ವರದಿಯನ್ನೂ ಪರಿಶೀಲಿಸಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟು ಗೆಲುವಿನ ಸಾಧ್ಯತೆ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೋಮವಾರ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ಅವರನ್ನು ಅಂತಿಮ ಸುತ್ತಿನ ಚರ್ಚೆಗಾಗಿ ದೆಹಲಿಗೆ ಕರೆಯುವ ಸಾಧ್ಯತೆ ಇದೆ. ಮಂಗಳವಾರ ಅಥವಾ ಬುಧವಾರ ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸಭಾಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm