ಬ್ರೇಕಿಂಗ್ ನ್ಯೂಸ್
23-07-26 08:05 pm HK News Desk ಕರ್ನಾಟಕ
ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಸಾವಿನ ಸುದ್ದಿ ಕೇಳಿ, ತಾಯಿ ಕೂಡ ಮೃತಪಟ್ಟ ಹೃದಯವಿದ್ರಾವಕ ಘಟನೆ ಧಾರವಾಡದ ತೇಜಸ್ವಿನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೆಹಬೂಬಸಾಬ್ ನದಾಫ್ (47) ಬುಧವಾರ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ ಮುಗುಟಬಿ (68) ನದಾಫ್ ಕೂಡ ನಿಧನವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೆಹಬೂಬಸಾಬ್ ನಿನ್ನೆ ಬೆಳಗ್ಗೆ ಧಾರವಾಡದ ರಾಜೀವ್ ಗಾಂಧಿ ನಗರದ ಬಳಿಯ ರೈಲು ಹಳಿಗೆ ಬಿದ್ದಿದ್ದರು. ಸಂಜೆ ಏಳು ಗಂಟೆಗೆ ಈತನ ಅಂತ್ಯಕ್ರಿಯೆ ಮಾಡಲು ಸ್ಥಳೀಯರು, ಕುಟುಂಬಸ್ಥರು ತಯಾರಿ ಮಾಡಿಕೊಂಡಿದ್ದರು. ಮನೆಯಿಂದ ಮಗನ ಅಂತ್ಯಕ್ರಿಯೆ ಮಾಡಲು ಶವ ತೆಗೆದುಕೊಂಡು ಹೋಗುತ್ತಿದ್ದಂತೆ ತಾಯಿ ಮುಗುಟಬಿ ಕೂಡ ಆತಂಕದಿಂದ ಅಸುನೀಗಿದ್ದಾರೆ. ಮಗನ ಅಂತ್ಯಕ್ರಿಯೆ ಮುಗಿಸಿ ಬಂದು ತಡರಾತ್ರಿ ತಾಯಿಯ ಅಂತ್ಯಕ್ರಿಯೆಯನ್ನು ಕೂಡ ಮಾಡಲಾಯಿತು ಎಂದು ಬಡಾವಣೆ ಜನರು ವಿಧಿಯಾಟಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಮೆಹಬೂಬಸಾಬ್ ಬಳಲುತ್ತಿದ್ದರು. ಇದನ್ನು ತಡೆಯಲಾರದೇ ನಿನ್ನೆ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ರೈಲ್ವೆ ಪೊಲೀಸರು ಸಂಜೆ ಮೃತನ ಶವ ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬದವರಿಗೆ ಹಸ್ತಾಂತರಿಸಿದ್ದರು. ಮನೆಯಿಂದ ಮಗನ ಅಂತ್ಯಕ್ರಿಯೆ ಮಾಡಲು ಮೃತದೇಹ ತೆಗೆದುಕೊಂಡು ಹೋಗುತ್ತಿದ್ದಾಗ ತಾಯಿ ಮುಗುಟಬಿ ಕೂಡ ಸಾವನ್ನಪ್ಪಿದ್ದಾಗಿ ಸ್ಥಳೀಯರು ನೋವು ತೋಡಿಕೊಂಡಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm