ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm