ಬ್ರೇಕಿಂಗ್ ನ್ಯೂಸ್
01-08-26 04:26 pm HK News Staffer ಕರ್ನಾಟಕ
ಬೆಂಗಳೂರು, ಆ. 1: ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ. ಹೈ ಫ್ಯಾಟ್, ಹೈ ಶುಗರ್ ಹಾಗೂ ಹೈ ಸಾಲ್ಟ್ ಅಂಶಗಳಿರುವ ಆಹಾರ ಉತ್ಪನ್ನಗಳ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದ್ದು, ನಿಯಮ ಉಲ್ಲಂಘಿಸುವ ಅಂಗಡಿಗಳ ವಿರುದ್ಧ 3 ಲಕ್ಷದವರೆಗೂ ದಂಡ ಹಾಗೂ ಪರವಾನಗಿ ರದ್ದುಗೊಳಿಸುವ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆಸಿದ ವಿಶೇಷ ಪರಿಶೀಲನಾ ಅಭಿಯಾನದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ ತಿಂಗಳಲ್ಲಿ ಅಧಿಕಾರಿಗಳು 134 ಶಾಲೆ ಹಾಗೂ ಕಾಲೇಜುಗಳಲ್ಲಿ ದಿಢೀರ್ ತಪಾಸಣೆ ನಡೆಸಿ, ಶಾಲಾ ಆವರಣ ಮತ್ತು ಸುತ್ತಮುತ್ತಲಿನ ಆಹಾರ ಮಳಿಗೆಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ, ನೈರ್ಮಲ್ಯ, ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಪರವಾನಗಿ ದಾಖಲೆಗಳನ್ನು ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಸಂಶಯಾಸ್ಪದ 53 ಆಹಾರ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥ ವ್ಯಾಪಾರಿಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006ರಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಜುಲೈ 21ರಿಂದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರ್ಗಸೂಚಿಯಂತೆ ಈ ನಿಯಮ ಜಾರಿಯಲ್ಲಿದ್ದು, ಶಾಲೆ ಹಾಗೂ ಪಿಯು ಕಾಲೇಜುಗಳ ಕ್ಯಾಂಟೀನ್‌ಗಳಿಗೂ ಇದು ಅನ್ವಯವಾಗಲಿದೆ.
ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, "ರೋಗ ಬಂದ ಬಳಿಕ ಚಿಕಿತ್ಸೆ ನೀಡುವುದಕ್ಕಿಂತ ಮೊದಲು ಅದನ್ನು ತಡೆಗಟ್ಟುವುದು ಮುಖ್ಯ. ಮಕ್ಕಳು ಏನು ತಿನ್ನುತ್ತಾರೆ ಎನ್ನುವುದೇ ಅವರ ಆರೋಗ್ಯವನ್ನು ನಿರ್ಧರಿಸುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತಿದ್ದೇವೆ. ಹೈ ಫ್ಯಾಟ್, ಹೈ ಶುಗರ್ ಹಾಗೂ ಹೈ ಸಾಲ್ಟ್ ಅಂಶಗಳಿರುವ ಆಹಾರ ಪದಾರ್ಥಗಳ ಮಾರಾಟವನ್ನು ಸಹಿಸಲಾಗುವುದಿಲ್ಲ," ಎಂದು ಹೇಳಿದ್ದಾರೆ.
ಶಾಲಾ ಆಡಳಿತ ಮಂಡಳಿಗಳು ಆರೋಗ್ಯಕರ ಆಹಾರ ಪದ್ಧತಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಲಾಗಿದ್ದು, ಆಹಾರ ವ್ಯಾಪಾರಿಗಳು ಹೊಸ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಪರಿಶೀಲನಾ ಅಭಿಯಾನ ಮುಂದುವರಿಯಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಯಾಕೆ ಈ ಆದೇಶ?
ಜುಲೈನಲ್ಲಿ ರಾಜ್ಯದ 134 ಶಾಲಾ- ಕಾಲೇಜುಗಳ ಕ್ಯಾಂಟೀನ್ ಗಳಲ್ಲಿ ನಡೆದ ಪರಿಶೀಲನ ವೇಳೆ ನೂರಕ್ಕೂ ಅಧಿಕ ಶಾಲೆಗಳಲ್ಲಿ ಬ್ರೆಡ್ ಪಾಸ್ತಾ ಹಾಗೂ ಸಂಸ್ಕರಿಸಿದ ಜಂಕ್ ಫುಡ್ ಮಾರಾಟವಾಗುತ್ತಿರುವುದು ಪತ್ತೆಯಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm