ಬ್ರೇಕಿಂಗ್ ನ್ಯೂಸ್
12-08-26 06:06 pm HK Staffer ಕರ್ನಾಟಕ
ಬೆಂಗಳೂರು, ಆ.12: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳ ಮಾರಾಟ ಮತ್ತು ಉತ್ಪಾದನೆಯ ಮೇಲೆ ಒಂದು ವರ್ಷದ ನಿಷೇಧ ಹೇರಿದೆ.
ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹಾಕಲಾಗಿದ್ದು, ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಹಾರ ಸುರಕ್ಷತಾ ಆಯುಕ್ತರು ನಿಷೇಧಿಸಿದ್ದಾರೆ. ಇದಲ್ಲದೆ, ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಅನುಕೂಲವಾಗುವಂತೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಈ ಕ್ರಮದಿಂದ ರಾಜ್ಯಾದ್ಯಂತ ಇಂತಹ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟಕ್ಕೆ ಒಂದು ವರ್ಷದ ಮಟ್ಟಿಗೆ ಸಂಪೂರ್ಣ ತಡೆ ಬೀಳಲಿದೆ. ಆದೇಶ ಉಲ್ಲಂಘಿಸುವ ತಯಾರಕರು, ವಿತರಕರು, ಚಿಲ್ಲರೆ ವ್ಯಾಪಾರಿಗಳು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗುವ ನಿರೀಕ್ಷೆಯಿದೆ. ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದಾದ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು
"ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಸೆಕ್ಷನ್ 30(2)(ಎ) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ, 2011ರ ನಿಯಮ 2.3.4ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ 10-08-2026ರಂದು ಸರ್ಕಾರದ ಅಧಿಸೂಚನೆ ಹೊರಡಿಸಿದೆ” ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಿಷೇಧಿತ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ನಡೆಯುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಆರೋಗ್ಯಕರ ಮತ್ತು ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಹಕರಿಸುವಂತೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. 2026ರ ಆಗಸ್ಟ್ 10ರಂದು ಹೊರಡಿಸಿರುವ ಈ ಅಧಿಸೂಚನೆಯು ಜಾರಿಯಾದ ದಿನದಿಂದ ಒಂದು ವರ್ಷದ ವರೆಗೆ ರಾಜ್ಯಾದ್ಯಂತ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am