ಬ್ರೇಕಿಂಗ್ ನ್ಯೂಸ್
12-08-26 06:57 pm HK News Staffer ಕರ್ನಾಟಕ
ಬೆಂಗಳೂರು, ಆ.12: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟಕ್ಕೆ ಎರಡನೇ ಬಾರಿಗೆ ಸಚಿವರಾಗಿ ಸೇರಿದ 19 ಮಂದಿಗೆ ಕೊನೆಗೂ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಇದರ ಜೊತೆಗೆ, ತಮ್ಮ ಖಾತೆಗಳ ಬಗ್ಗೆ ಕ್ಯಾತೆ ತೆಗೆದಿದ್ದ ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರ ಖಾತೆಗಳನ್ನು ಬದಲಿಸಿದರೆ, ಆರೋಗ್ಯ ಸಚಿವ ಯು.ಟಿ ಖಾದರ್ ಗೆ ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿ ಕೊಟ್ಟು ರಾಜ್ಯಪಾಲರ ಅಂಕಿತ ಪಡೆಯಲಾಗಿದೆ.
ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ ಮತ್ತು ಪರಿಸರ, ಮುನಿಯಪ್ಪ ಅವರಿಗೆ ಅವರು ಬಯಸಿದ್ದ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಉಳಿದಂತೆ, ಜಮೀರ್ ಅಹ್ಮದ್ ಅವರಿಗೆ ಈ ಹಿಂದೆ ಇದ್ದ ವಸತಿ ಖಾತೆಯನ್ನಷ್ಟೇ ನೀಡಲಾಗಿದೆ. ಅವರ ಕೈಯಲ್ಲಿದ್ದ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಖಾತೆಯನ್ನು ಕಿತ್ತು ಖಾದರ್ ಕೈಗೆ ಕೊಡಲಾಗಿದೆ. ಲಕ್ಷ್ಮಣ ಸವದಿಗೆ ಸಹಕಾರ(ಕೃಷಿ ಮಾರುಕಟ್ಟೆ ಹೊರತುಪಡಿಸಿ), ರುದ್ರಪ್ಪ ಲಮಾಣಿಗೆ ಸಕ್ಕರೆ ಮತ್ತು ಟೆಕ್ಸ್ ಟೈಲ್ಸ್, ಶಿವರಾಜ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಟಿ. ರಘುಮೂರ್ತಿಗೆ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಡಾ.ಅಜಯ್ ಸಿಂಗ್ ಅವರಿಗೆ ಸಣ್ಣ ನೀರಾವರಿ, ಸೈನ್ಸ್ ಅಂಡ್ ಟೆಕ್ನಾಲಜಿ, ಚೆಲುವರಾಯಸ್ವಾಮಿ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಖಾತೆ ವಹಿಸಲಾಗಿದೆ.

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಬಸವರಾಜ ರಾಯರೆಡ್ಡಿ- ಉನ್ನತ ಶಿಕ್ಷಣ, ಶಿವಲಿಂಗೇಗೌಡ – ಅಬಕಾರಿ, ಪುಟ್ಟರಂಗ ಶೆಟ್ಟಿ- ಪಶು ಸಂಗೋಪನೆ, ವಿಜಯಾನಂದ ಕಾಶಪ್ಪನವರ್- ಸಣ್ಣ ಕೈಗಾರಿಕೆ, ಸಂತೋಷ್ ಲಾಡ್- ಕಾರ್ಮಿಕ ಮತ್ತು ಉದ್ಯೋಗ ಇಲಾಖೆ, ಕೆ.ಎಸ್ ಬಸವಂತಪ್ಪ- ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಎಸ್.ಎಸ್ ಮಲ್ಲಿಕಾರ್ಜುನ- ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ, ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ನರೇಂದ್ರ ಸ್ವಾಮಿ- ಕೃಷಿ, ಎಚ್.ಸಿ ಬಾಲಕೃಷ್ಣ – ನಗರಾಡಳಿತ, ಬಿ.ನಾಗೇಂದ್ರ- ಯೋಜನೆ ಮತ್ತು ಅಂಕಿ ಅಂಶಗಳ ಖಾತೆಯನ್ನು ಕೊಡಲಾಗಿದೆ.
ಆಮೂಲಕ ನಾಗೇಂದ್ರ, ಬಾಲಕೃಷ್ಣ ಅವರನ್ನು ಬದಲಾವಣೆ ಮಾಡುತ್ತಾರೆ ಎಂಬ ವದಂತಿ ವದಂತಿಯಾಗೇ ಉಳಿದಿದೆ. ಎಲ್ಲರಿಗೂ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರಭಾವಿ ಖಾತೆಗಳನ್ನು ಹೊಂದಿದ್ದ ಜಮೀರ್ ಅಹ್ಮದ್ ಅವರಿಗೆ ಮಾತ್ರ ಡೌನ್ ಗ್ರೇಡ್ ಮಾಡಲಾಗಿದೆ. 23 ಸಚಿವರ ಪಟ್ಟಿಗೆ ರಾಜ್ಯಪಾಲರು ಸಹಿ ಹಾಕಿದ್ದನ್ನು ಮುಖ್ಯಮಂತ್ರಿ ಕಚೇರಿಯಿಂದ ಬಿಡುಗಡೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಗೆ ಯಾರನ್ನೂ ನೇಮಕ ಮಾಡದೆ ಹಾಗೇ ಉಳಿಸಿಕೊಳ್ಳಲಾಗಿದೆ. ಆ.13ರಿಂದ ಅಧಿವೇಶನ ಇರುವುದರಿಂದ ತರಾತುರಿಯಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am