ಬ್ರೇಕಿಂಗ್ ನ್ಯೂಸ್
17-08-26 02:26 pm HK News Staffer ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಸಾರ್ವಜನಿಕರು ಆಹಾರದ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಕುರಿತು ನೇರವಾಗಿ ದೂರು ಸಲ್ಲಿಸಬಹುದಾಗಿದೆ. ಸಾರ್ವಜನಿಕರ ದೂರುಗಳು ತ್ವರಿತವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಲುಪುವಂತೆ ಈ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೋಟೆಲ್ ಮಾತ್ರವಲ್ಲ; ಪಿಜಿ, ಬಸ್ ನಿಲ್ದಾಣದಲ್ಲೂ ತಪಾಸಣೆ!
ಬೆಂಗಳೂರು ನಗರದ ಹೋಟೆಲ್‌ಗಳ ಮೇಲಿನ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್, ಪಿಜಿ, ಬಸ್ ನಿಲ್ದಾಣ, ಮದುವೆ ಮನೆ, ರೈಲ್ವೆ ಕ್ಯಾಂಟೀನ್ ಹಾಗೂ ವಿಮಾನಗಳಲ್ಲಿ ನೀಡುವ ಆಹಾರವನ್ನೂ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಪತ್ತೆಯಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
60ಕ್ಕೂ ಹೆಚ್ಚು ಸ್ಟಾರ್ ಹೋಟೆಲ್‌ಗಳ ಮೇಲೆ ಪರಿಶೀಲನೆ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೇ 60ಕ್ಕೂ ಹೆಚ್ಚು 3-ಸ್ಟಾರ್ ಹಾಗೂ 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಮತ್ತು 4 ಎಂಟರ್‌ಪ್ರೈಸ್ ರೆಸ್ಟೋರೆಂಟ್‌ಗಳ ಮೇಲೆ ಪರಿಶೀಲನೆ ನಡೆಸಲಾಗಿದೆ. ಆಹಾರ ಸುರಕ್ಷತೆ ಹಾಗೂ ಆರೋಗ್ಯ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ 30 ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ.
ತಪಾಸಣೆ ವೇಳೆ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಪಾಲನೆ, ಆಹಾರ ಸಂಗ್ರಹಣೆಯ ವಿಧಾನ, ಅವಧಿ ಹಾಗೂ ಆಹಾರದ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.
ನೂರಾರು ಕೆಜಿ ಕಳಪೆ ಆಹಾರ ಪದಾರ್ಥ ಪತ್ತೆ!
ತಪಾಸಣೆ ವೇಳೆ ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಹಲವು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm