ಬ್ರೇಕಿಂಗ್ ನ್ಯೂಸ್
28-08-26 09:35 pm HK News Staffer ಕರ್ನಾಟಕ
ಬೆಂಗಳೂರು, ಆ.28: ಸಿನಿಮಾಗಳಲ್ಲಿ ಹಿಂಸಾಚಾರ, ಮಹಿಳೆಯರನ್ನು ಅಸಭ್ಯವಾಗಿ ಬಿಂಬಿಸುತ್ತಿರುವ ಕುರಿತಾಗಿ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನ ಸ್ಟಾರ್ ರಾಜಕಾರಣಿ ಕೆ. ಅಣ್ಣಾಮಲೈ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ದೃಶ್ಯಗಳ ಬಗ್ಗೆ ಸೆನ್ಸಾರ್ ಮಂಡಳಿ (ಸಿಬಿಎಫ್‌ಸಿ) ತನ್ನ ಜವಾಬ್ದಾರಿಯನ್ನು ಇನ್ನಷ್ಟು ಕಠಿಣವಾಗಿ ನಿರ್ವಹಿಸಬೇಕಾಗಿದೆ ಎಂದು ಹೇಳಿದ್ದಾರೆ.
ನಟ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಚಿತ್ರದ ಸುತ್ತ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಅಣ್ಣಾಮಲೈ ಈ ಮಾತುಗಳನ್ನಾಡಿದ್ದಾರೆ. ಅಮೆರಿಕ ಮತ್ತು ಯುರೋಪ್ ದೇಶಗಳಲ್ಲಿ ವಯೋಮಿತಿಗೆ ತಕ್ಕಂತೆ ಸೆನ್ಸಾರ್ ನಿಯಮಗಳು ಎಷ್ಟೊಂದು ಬಿಗಿಯಾಗಿವೆ ಎಂಬುದನ್ನು ನಾವು ನೋಡಬಹುದು. ಆದರೆ ಭಾರತದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಸೂಕ್ತವಲ್ಲದ ದೃಶ್ಯಗಳು ಅಡೆ ತಡೆಯಿಲ್ಲದೆ ಪ್ರದರ್ಶನಗೊಳ್ಳುತ್ತಿವೆ.
ಯಾವುದೇ ಚಿತ್ರವನ್ನು ಸಂಪೂರ್ಣ ನಿಷೇಧಿಸಿ ಎಂದು ಹೇಳುತ್ತಿಲ್ಲ. ಆದರೆ ಸರಿಯಾದ ರೀತಿಯಲ್ಲಿ ಸೆನ್ಸಾರ್ ಆಗಬೇಕು. ಪ್ರಮಾಣಪತ್ರ ನೀಡಿದ ನಂತರ ಚಿತ್ರಮಂದಿರಗಳಲ್ಲಿ ವಯಸ್ಸಿನ ಅಂತರವಿಲ್ಲದೆ ನೋಡುವಂತಿರಬೇಕು. ಮಲ್ಟಿಪ್ಲೆಕ್ಸ್ ಹೊರತುಪಡಿಸಿ, ಇತರೇ ಚಿತ್ರಮಂದಿರಗಳಲ್ಲಿ ಯಾರು ಬೇಕಾದರೂ ಒಳಗೆ ಹೋಗುವ ವಾತಾವರಣವಿದೆ. ಸ್ಟಾರ್ ನಟರು ನಟಿಸಿದ್ದಾರೆ ಎಂಬ ಕಾರಣಕ್ಕೆ ಎಲ್ಲವನ್ನೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹ ಧೋರಣೆಯಿಂದ ವಿದ್ಯಾರ್ಥಿ, ಯುವ ಸಮುದಾಯ ದಾರಿ ತಪ್ಪುತ್ತಿದೆ.
ಒಂದೆಡೆ ನಾವು ಮಹಿಳಾ ಸಬಲೀಕರಣ, ದೌರ್ಜನ್ಯಗಳ ವಿರುದ್ಧ ಮಾತನಾಡುತ್ತೇವೆ. ಆದರೆ ಸಿನಿಮಾಗಳಲ್ಲಿ ಮಹಿಳೆಯನ್ನು ಕೇವಲ ಭೋಗದ ವಸ್ತುವಿನಂತೆ ಬಿಂಬಿಸಲಾಗುತ್ತಿದೆ. ಸಮಾಜದ ಮೇಲೆ ಅಗಾಧ ಪ್ರಭಾವ ಬೀರುವ ಶಕ್ತಿ ಚಿತ್ರರಂಗಕ್ಕಿದೆ. ಆದರೆ ಇತ್ತೀಚೆಗೆ ಬರುತ್ತಿರುವ ಕೆಲವು ಚಿತ್ರಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿವೆ," ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಾಕ್ಸಿಕ್ ಚಿತ್ರದಲ್ಲಿ ಅತಿಯಾದ ಹಿಂಸೆ, ಅಶ್ಲೀಲತೆ ಕುರಿತು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಅಣ್ಣಾಮಲೈ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm