ಬ್ರೇಕಿಂಗ್ ನ್ಯೂಸ್
30-08-26 10:09 pm HK News Desk ಕರ್ನಾಟಕ
ಕೊಪ್ಪಳ, ಆ.30: ಇಸ್ಲಾಂ ಇಡೀ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಧರ್ಮವಾಗಿದ್ದು, ನನಗೆ ಹಜ್ ಯಾತ್ರೆಗೆ ಹೋಗುವ ಆಸೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಯರೆಡ್ಡಿ, ನಾನು ಹೆಚ್ಚಾಗಿ ಮಠ, ಮಂದಿರಕ್ಕೆ ಹೋಗಲ್ಲ. ಆದರೆ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬ ಆಸೆ ಇದೆ.ಆದರೆ ನನಗೆ ಅವಕಾಶ ಇಲ್ಲ. ಮುಸ್ಲಿಂ ಅಲ್ಲದವರಿಗೆ ಹಜ್ ಯಾತ್ರೆಗೆ ಬಿಡಲ್ಲ. ಅದಕ್ಕೆ ಬೇಕಾಗಿ ಖುರಾನ್ ಓದಲು ಸಿದ್ಧನಿದ್ದೇನೆ ಎಂದು ರಾಯರೆಡ್ಡಿ ಹೇಳಿದ್ದಾರೆ.
ಇಸ್ಲಾಂ ಅತ್ಯಂತ ಮಾನವೀಯತೆಯಿಂದ ಕೂಡಿದ ಧರ್ಮವಾಗಿದೆ. ಆದರೆ ಇಸ್ಲಾಂ ಧರ್ಮದ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆಗಳನ್ನು ಹರಡಲಾಗುತ್ತಿದೆ. ಮನುಷ್ಯ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಈ ಧರ್ಮ ಹೇಳಿಕೊಡುತ್ತದೆ. ಕುರಾನ್ ಕೇವಲ ಮುಸ್ಲಿಮರಿಗೆ ಮಾತ್ರ ಸೀಮಿತವಲ್ಲ. ಮಹಮ್ಮದ್ ಪೈಗಂಬರರು ಇಡೀ ಬ್ರಹ್ಮಾಂಡಕ್ಕೆ ಕುರಾನ್ ನೀಡಿದ್ದಾರೆ. ಯಾರು ಬೇಕಾದರೂ ಕುರಾನ್ ಓದಬಹುದು, ನಾನೂ ಸಹ ಕುರಾನ್ ಅಧ್ಯಯನ ಮಾಡಲು ಸಿದ್ಧನಿದ್ದೇನೆ ಎಂದರು.
ದೇವರು ನಿರಾಕಾರ, ಆಕಾರವಿಲ್ಲ, ವ್ಯಕ್ತಿಪೂಜೆ ಇಲ್ಲ. ಯಾವುದೇ ಧರ್ಮ ಕೆಟ್ಟದ್ದು ಮಾಡು ಎಂದು ಹೇಳಿಲ್ಲ. ಇಸ್ಲಾಂ ಧರ್ಮದಲ್ಲಿ ಕುಡಿಯುವಂತಿಲ್ಲ, ದಿನಕ್ಕೆ ಐದು ಬಾರಿ ನಮಾಜು ಮಾಡಬೇಕು. ವಾರ್ಷಿಕವಾಗಿ ರೋಜಾ ಆಚರಣೆ ಮಾಡಬೇಕು. ಜಕಾತ್ ನೀಡಬೇಕು. ಮಧ್ಯದಂಗಡಿ ವ್ಯಾಪಾರ ಮಾಡುವಂತಿಲ್ಲ. ಉರ್ದು ಭಾಷೆ ಹೊಸದಿಲ್ಲಿಯಲ್ಲಿ ಹುಟ್ಟಿದ್ದು, ಇಸ್ಲಾಂ ಧರ್ಮದ ಬಗ್ಗೆ ತಪ್ಪು ಕಲ್ಪನೆಗಳನ್ನು ಕೆಲವರು ಬಿತ್ತುತ್ತಿದ್ದಾರೆ. ಮುಸಲ್ಮಾನರು ರಕ್ತ ಕುಡಿಯಂಗಿಲ್ಲ. ಇಂತಹ ಕಾನೂನು ಇಸ್ಲಾಂ ಧರ್ಮದಲ್ಲಿದೆ ಎಂದು ಹೇಳಿದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm