ಬ್ರೇಕಿಂಗ್ ನ್ಯೂಸ್
08-09-26 02:24 pm HK News Staffer ಕರ್ನಾಟಕ
ಚಿಕ್ಕಮಗಳೂರು, ಸೆಪ್ಟೆಂಬರ್ 8: ರಸ್ತೆ ಎಂದರೆ ಕೇವಲ ವಾಹನಗಳು ಓಡಾಡುವ ಮಾರ್ಗವಲ್ಲ. ಅದು ಶಿಕ್ಷಣ, ಆರೋಗ್ಯ, ವ್ಯಾಪಾರ, ಉದ್ಯೋಗ ಸೇರಿದಂತೆ ಗ್ರಾಮೀಣ ಬದುಕಿನ ಹಲವು ಅಗತ್ಯಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿ. ಆದರೆ, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಲವು ಗ್ರಾಮಗಳಲ್ಲಿ ವರ್ಷಗಳಿಂದ ಹದಗೆಟ್ಟಿರುವ ರಸ್ತೆಯ ಸಮಸ್ಯೆ ಇದೀಗ ಮದುವೆ ಸಂಬಂಧಗಳ ಮೇಲೂ ಪರಿಣಾಮ ಬೀರುತ್ತಿದೆ.
ಕಳಸ ತಾಲೂಕಿನ ಮಾವಿನಕೆರೆ, ಬಾಳೆಖಾನ್, ಎಡೂರು, ಬಂಗಾರ, ಕೂಡಿಗೆ–ಕೆಳಗೂರು, ಜೇಡಿಬೈಲು–ಮಾವಿನಕೆರೆ ಹಾಗೂ ಬಾಳೆಹೊಳೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಸುಮಾರು 10 ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
10 ವರ್ಷಗಳಿಂದ ರಸ್ತೆಗಾಗಿ ಹೋರಾಟ
ಈ ಭಾಗದ ನೂರಾರು ಜನರಿಗೆ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಮಾರ್ಗ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹದಗೆಟ್ಟ ಸ್ಥಿತಿಯಲ್ಲಿದೆ. ಅದರಲ್ಲೂ ಮಳೆಗಾಲದಲ್ಲಿ ರಸ್ತೆಯ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ತೆರಳುವುದು, ಶಾಲೆ-ಕಾಲೇಜು ತಲುಪುವುದು, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸುವುದು ಸೇರಿದಂತೆ ದೈನಂದಿನ ಅಗತ್ಯಗಳಿಗೂ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
‘ಹುಡುಗ-ಹುಡುಗಿ ಒಪ್ಪಿದ್ರೂ ರಸ್ತೆ ನೋಡಿ ಸಂಬಂಧ ಬೇಡ ಅಂತಾರೆ!’
ರಸ್ತೆಯ ದುಸ್ಥಿತಿ ಇದೀಗ ಕೇವಲ ಸಂಚಾರದ ಸಮಸ್ಯೆಯಾಗಿ ಉಳಿದಿಲ್ಲ ಬದಲಾಗಿ ಮದುವೆ ಸಂಬಂಧಗಳ ಮೇಲೂ ಇದರ ಪರಿಣಾಮ ಬೀರುತ್ತಿದೆ. ಹುಡುಗನನ್ನು ನೋಡಲು ಹುಡುಗಿಯ ಮನೆಯವರು ಗ್ರಾಮಕ್ಕೆ ಬಂದಾಗ ಗುಂಡಿ-ಗದ್ದೆಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸಂಚಾರವೇ ಸವಾಲಾಗುತ್ತಿದೆ. ಅದೇ ರೀತಿ ಹುಡುಗಿಯನ್ನು ನೋಡಲು ತೆರಳುವ ಸಂದರ್ಭದಲ್ಲೂ ಗ್ರಾಮದ ಸಂಪರ್ಕ ರಸ್ತೆಯ ದುಸ್ಥಿತಿ ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ‘ಹುಡುಗ-ಹುಡುಗಿ ಇಬ್ಬರೂ ಒಪ್ಪಿಗೆಯಾದರೂ, ಗ್ರಾಮಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ನೋಡಿ ಸಂಬಂಧ ಬೇಡ ಎನ್ನುವ ಸ್ಥಿತಿ ಬಂದಿದೆ’.
ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆಗಳು ಮತ್ತಷ್ಟು ಹದಗೆಟ್ಟು ವಾಹನ ಸಂಚಾರ ಕಷ್ಟವಾಗುತ್ತದೆ. ಇದರಿಂದ ಗ್ರಾಮಕ್ಕೆ ಬರುವ ಹೊರಗಿನವರು ಇಲ್ಲಿನ ಮೂಲಸೌಕರ್ಯದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದುವಂತಾಗಿದೆ.
ರಸ್ತೆ ಇಲ್ಲದಿದ್ದರೆ ಮತವೂ ಇಲ್ಲ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ವರ್ಷಗಳಿಂದ ರಸ್ತೆ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶ ಇದೀಗ ಚುನಾವಣೆ ಬಹಿಷ್ಕಾರದ ಹಂತಕ್ಕೆ ತಲುಪಿದೆ. ‘10 ವರ್ಷಗಳಿಂದ ರಸ್ತೆಗಾಗಿ ಮನವಿ ಮಾಡುತ್ತಿದ್ದೇವೆ. ನಮ್ಮ ಸಮಸ್ಯೆ ಕೇಳುವವರು ಯಾರೂ ಇಲ್ಲ. ರಸ್ತೆ ಅಭಿವೃದ್ಧಿಯಾಗುವವರೆಗೂ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಮತ ಹಾಕುವುದಿಲ್ಲ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ. ಈ ಸಂಬಂಧ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್‌ಗಳನ್ನು ಅಳವಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಭಾಗದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಶಾಸಕಿ ನಯನಾ ಮೋಟಮ್ಮ ಗಮನಕ್ಕೆ ಗ್ರಾಮಸ್ಥರ ಆಗ್ರಹ
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಳಸ ತಾಲೂಕಿನಲ್ಲಿ ಗ್ರಾಮೀಣ ರಸ್ತೆ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಹಾಗೂ ಸರ್ಕಾರ ಈ ಸಮಸ್ಯೆಯತ್ತ ತಕ್ಷಣ ಗಮನಹರಿಸಿ, ಗ್ರಾಮಸ್ಥರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ರಸ್ತೆ ಅಭಿವೃದ್ಧಿಯಾದರೆ ಕೇವಲ ವಾಹನ ಸಂಚಾರಕ್ಕೆ ಅನುಕೂಲವಾಗುವುದಲ್ಲ. ವಿದ್ಯಾರ್ಥಿಗಳ ಶಿಕ್ಷಣ, ರೈತರ ಕೃಷಿ ಉತ್ಪನ್ನಗಳ ಸಾಗಾಟ, ತುರ್ತು ಆರೋಗ್ಯ ಸೇವೆ, ವ್ಯಾಪಾರ-ವಹಿವಾಟು ಹಾಗೂ ಗ್ರಾಮೀಣ ಜನರ ಸಾಮಾಜಿಕ ಬದುಕಿಗೂ ಅನುಕೂಲವಾಗಲಿದೆ. ಹೀಗಾಗಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಂಡು ಸುಸಜ್ಜಿತ ಸಂಪರ್ಕ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದೆ.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm