ಬ್ರೇಕಿಂಗ್ ನ್ಯೂಸ್
16-09-26 01:51 pm HK News Staffer ಕರ್ನಾಟಕ
ಬೆಂಗಳೂರು , ಸೆಪ್ಟೆಂಬರ್ 16: ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಸಂವಿಧಾನಾತ್ಮಕ ಹಾಗೂ ಕಾನೂನು ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಸಚಿವರ ಹೇಳಿಕೆ ತುಳು ಭಾಷಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
2023ರಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ
ತುಳು ಭಾಷೆಯ ಇತಿಹಾಸ, ಸಾಹಿತ್ಯ ಪರಂಪರೆ, ಲಿಪಿ, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯ, ಸಂಸ್ಕೃತಿ ಮತ್ತು ತುಳು ಶಾಸನಗಳ ಕುರಿತು ಸಮಗ್ರ ಅಧ್ಯಯನ ನಡೆಸಲು ಡಾ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ತನ್ನ ಅಧ್ಯಯನ ನಡೆಸಿ 2023ರ ಫೆಬ್ರುವರಿ 14ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದರ ಮುಂದುವರಿದ ಹಂತವಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚುವರಿ ಅಥವಾ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿರುವ ಮಾದರಿಗಳನ್ನು ಅಧ್ಯಯನ ಮಾಡಲು ರಾಜ್ಯ ಸರ್ಕಾರ 2025ರ ಜುಲೈ 30ರಂದು ಅಧ್ಯಯನ ತಂಡ ರಚಿಸಿತ್ತು.
ಆಂಧ್ರಪ್ರದೇಶದ ಅಧಿಕೃತ ಭಾಷಾ ವ್ಯವಸ್ಥೆಯ ಅಧ್ಯಯನ
ಅಧ್ಯಯನ ತಂಡವು 2026ರ ಜನವರಿ 19 ಮತ್ತು 20ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕೃತ ಭಾಷಾ ವ್ಯವಸ್ಥೆ, ಕಾನೂನು ಚೌಕಟ್ಟು ಹಾಗೂ ಅನುಷ್ಠಾನದ ಮಾದರಿಗಳನ್ನು ಪರಿಶೀಲಿಸಿತ್ತು. ಈ ಅಧ್ಯಯನದ ಆಧಾರದ ಮೇಲೆ ತಂಡವು 2026ರ ಮಾರ್ಚ್ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದು ಸಚಿವ ತಂಗಡಗಿ ತಿಳಿಸಿದ್ದಾರೆ.
‘ತುಳು ಕರಾವಳಿಯ ಭಾಷೆ, ಸಂಸ್ಕೃತಿಯ ಅವಿಭಾಜ್ಯ ಅಂಗ’
ತುಳು ಭಾಷೆಯ ಕುರಿತು ಮಾತನಾಡಿರುವ ಸಚಿವ ತಂಗಡಗಿ, “ತುಳು ನಮ್ಮ ಕರಾವಳಿಯ ಭಾಷೆ. ಅದು ಕರ್ನಾಟಕದ ಶ್ರೀಮಂತ ಭಾಷಾ–ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗ. ತುಳು ಭಾಷೆಯ ಗೌರವ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ. ಅದೇ ವೇಳೆ ತುಳು ಭಾಷೆಯಲ್ಲಿಯೂ ಸಂದೇಶ ನೀಡಿರುವ ಅವರು, “ಯಾನ್ ಏಪಲಾ ಜನಕ್ಲೆನ ಭಾವನೆಲೆನ ಒಟ್ಟುಗು ಇಪ್ಪುವೆ” ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸ್ವಾಗತ, ನಿರೀಕ್ಷೆ
ಸಚಿವರ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಹಲವು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಹಲವರು ಸರ್ಕಾರದ ಕ್ರಮವನ್ನು ಸ್ವಾಗತಿಸಿ, ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರೆಯುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಗುರುರಾಜ್ ರೈ ಪಿ.ವಿ. ಅವರು “ಜೈ ತುಳುನಾಡ್” ಎಂದು ಪ್ರತಿಕ್ರಿಯಿಸಿದ್ದರೆ, ಅವಿನಾಶ್ ದೇವಾಡಿಗ ಅವರು “ಸೊಲ್ಮೆಲು #ತುಳು ಅಧಿಕೃತ ಕೆಎ_ಕೆಎಲ್” ಎಂದು ಪ್ರತಿಕ್ರಿಯಿಸಿದ್ದಾರೆ.
‘Hello Mangalore’ ಖಾತೆಯಿಂದ “ಶೀಘ್ರದಲ್ಲೇ ಒಳ್ಳೆಯ ಸುದ್ದಿಯನ್ನು ಕೇಳುವ ಭರವಸೆ ಇದೆ” ಎಂದು ಪ್ರತಿಕ್ರಿಯೆ ಬಂದಿದೆ. ‘Namma Karnataka Weather’ ಖಾತೆಯೂ ಸಚಿವರ ಉಪಕ್ರಮವನ್ನು ಸ್ವಾಗತಿಸಿ, ಮುಂದಿನ ದಿನಗಳಲ್ಲಿ ಒಳ್ಳೆಯ ಸುದ್ದಿ ನಿರೀಕ್ಷಿಸುತ್ತಿರುವುದಾಗಿ ತಿಳಿಸಿದೆ. ‘TaulavaKiran’ ಅವರು, “ನಿಮ್ಮ ಮಾತುಗಳು ನಮಗೆ ಹೊಸ ಭರವಸೆಯನ್ನು ನೀಡಿವೆ. ನಾವು ಕಾದು ನೋಡುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.
ಡಾ. ಅರುಣ್ ಮಾವಜಿ ಅವರು ಸಕಾರಾತ್ಮಕ ಪ್ರತಿಕ್ರಿಯೆಗಳಿಗೆ ಧನ್ಯವಾದ ಸಲ್ಲಿಸಿ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ಸಿಗುವುದನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.
‘ಇತಿಹಾಸದ ಪುಟದಲ್ಲಿ ಹೆಸರು ಭದ್ರಪಡಿಸಿಕೊಳ್ಳಿ’
ಕನ್ನಡರಾಯ ಎಂಬ ಖಾತೆಯಲ್ಲಿ, “ಈ ಕೆಲಸವೊಂದನ್ನು ಮಾಡಿ ಇತಿಹಾಸದ ಪುಟದಲ್ಲಿ ನಿಮ್ಮ ಹೆಸರನ್ನು ಭದ್ರಪಡಿಸಿಕೊಳ್ಳಿ ತಂಗಡಗಿ ಅವರೇ... ಒಳ್ಳೆಯದಾಗಲಿ, ಮುಂದುವರಿಯಿರಿ” ಎಂದು ಪ್ರತಿಕ್ರಿಯಿಸಲಾಗಿದೆ. TULU CHAVADI ಖಾತೆಯಿಂದ “ಧನ್ಯವಾದಗಳು (Solmelu)” ಎಂದು ಪ್ರತಿಕ್ರಿಯಿಸಲಾಗಿದ್ದು, #TuluOfficialinKA_KL ಹ್ಯಾಶ್ಟ್ಯಾಗ್ ಕೂಡ ಬಳಕೆಯಾಗಿದೆ. ಶೆಟ್ಟಿ, ಪ್ರಜ್ವಲ್ ಭಂಡಾರಿ, ಸುಕೇಶ್ ಸೇರಿದಂತೆ ಹಲವರು ‘ಧನ್ಯವಾದಗಳು’, ‘ಸಂತೋಷ’, ‘ಸೊಲ್ಮೇಲು ಸರ್’ ಎಂಬ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.
ಭರವಸೆ ಈಡೇರುವ ಕುರಿತು ಕೆಲವರ ಪ್ರಶ್ನೆ
ಇದೇ ವೇಳೆ, ಸರ್ಕಾರದ ಭರವಸೆ ಈಡೇರುವ ಕುರಿತು ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿಯೂ ಭರವಸೆ ವ್ಯಕ್ತವಾಗುತ್ತದೆಯಾದರೂ ಅದು ಈಡೇರುವುದಿಲ್ಲ ಎಂಬ ಅಭಿಪ್ರಾಯವನ್ನೂ ಕೆಲವರು ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರದ ಪರಿಣಾಮಗಳನ್ನು ಅದು ಜಾರಿಗೆ ಬರುವ ಮುನ್ನವೇ ವಿಮರ್ಶಿಸುವುದು ಸೂಕ್ತ ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಇತರ ಅಲ್ಪಸಂಖ್ಯಾತ ಭಾಷಿಕ ಸಮುದಾಯಗಳೂ ತಮ್ಮ ಭಾಷೆಗಳಿಗೆ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಮುಂದಿಡುವ ಸಾಧ್ಯತೆಯ ಬಗ್ಗೆ ಕೆಲವರು ಪ್ರಶ್ನಿಸಿದ್ದಾರೆ.
ಮರಾಠಿ ಹಾಗೂ ಕೊಂಕಣಿ ಭಾಷೆಗಳಿಗೂ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಅಭಿಪ್ರಾಯವೂ ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತವಾಗಿದೆ. ಸದ್ಯ ತುಳು ಭಾಷೆಗೆ ಹೆಚ್ಚುವರಿ ಅಥವಾ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ಸರ್ಕಾರದ ಮುಂದಿನ ಕ್ರಮದತ್ತ ಕರಾವಳಿಯ ತುಳು ಭಾಷಿಕರು ಹಾಗೂ ವಿವಿಧ ಸಂಘಟನೆಗಳು ಗಮನಹರಿಸಿವೆ.
The Karnataka government is seriously considering granting Tulu the status of the state’s second additional official language and is exploring necessary steps within the constitutional and legal framework, Kannada and Culture Minister Shivaraj S. Tangadagi has said. His statement has raised fresh expectations among Tulu-speaking communities.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm