ಬ್ರೇಕಿಂಗ್ ನ್ಯೂಸ್
16-09-26 10:40 pm kannada news ಕರ್ನಾಟಕ
ಬೆಂಗಳೂರು, ಸೆ.16 ಕನ್ನಡ ಚಿತ್ರರಂಗದ ಶ್ರೇಷ್ಠ ನಟರಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ʻದಾದಾ ಸಾಹೇಬ್ ಫಾಲ್ಕೆʼ ಪ್ರಶಸ್ತಿ ಪ್ರಕಟವಾಗಿದೆ. ಭಾರತೀಯ ಚಲನಚಿತ್ರ ರಂಗಕ್ಕೆ ನೀಡಿದ ಕೊಡುಗೆಯನ್ನ ಪರಿಗಣಿಸಿ ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
1995ರಲ್ಲಿ ಕನ್ನಡ ಚಿತ್ರರಂಗದ ಡಾ. ರಾಜ್‌ಕುಮಾರ್ ಅವರಿಗೆ ಮೊದಲ ಬಾರಿಗೆ ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿ ಲಭಿಸಿತ್ತು. ತದನಂತರ, 2008ರಲ್ಲಿ ಕನ್ನಡಿಗ ವಿ.ಕೆ ಮೂರ್ತಿ ಅವರಿಗೆ ಈ ಪ್ರಶಸ್ತಿ ಒಲಿದುಬಂದಿತ್ತು. ಈಗ ಬರೋಬ್ಬರಿ 16 ವರ್ಷಗಳ ಸುದೀರ್ಘ ವಿರಾಮದ ಬಳಿಕ ಮತ್ತೊಬ್ಬ ಕನ್ನಡದ ನಟ ಅನಂತ್ ನಾಗ್ ಅವರಿಗೆ ಅತ್ಯುನ್ನತ ಗೌರವ ಲಭಿಸಿದೆ. ಅಭಿನಯ ಕ್ಷೇತ್ರದಲ್ಲಿ ಡಾ. ರಾಜ್‌ಕುಮಾರ್ ನಂತರ ಚಿತ್ರರಂಗದ ಶ್ರೇಷ್ಠ ಪ್ರಶಸ್ತಿಯೆಂದು ಗುರುತಿಸಲ್ಪಡುವ ಫಾಲ್ಕೆ ಪಡೆಯುತ್ತಿರುವ ಎರಡನೇ ನಟ ಎಂಬ ಹೆಗ್ಗಳಿಕೆ ಅನಂತ್ ನಾಗ್ ಅವರದ್ದು. ಕನ್ನಡ, ಹಿಂದಿ, ಮರಾಠಿ, ತೆಲುಗು ಮತ್ತು ಮಲೆಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ತಮ್ಮ ನಟನೆಯ ತೋರಿಸಿದರೂ, ಅತಿ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು ಬೆಳೆದಿದ್ದು ಕನ್ನಡದಲ್ಲಿ.
ಸಿನಿಮಾ ರಂಗದ ಅತ್ಯುನ್ನತ ಗೌರವವೆನಿಸಿದ ಈ ಪ್ರಶಸ್ತಿಯು ಅನಂತ್ ನಾಗ್ ಅವರ ಹಲವು ದಶಕಗಳ ಅದ್ಭುತ ಸಿನಿಮಾ ಪಯಣಕ್ಕೆ ಸಂದ ಗೌರವವೂ ಹೌದು. ಇದೇ ಸೆಪ್ಟೆಂಬರ್ 22, 2026ರಂದು ಗುಜರಾತ್‌ನ ಏಕ್ತಾ ನಗರದಲ್ಲಿ ನಡೆಯಲಿರುವ ʻ72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿʼ ಪ್ರದಾನ ಸಮಾರಂಭದಲ್ಲಿ ಫಾಲ್ಕೆ ಗೌರವವನ್ನ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ಚಿತ್ರರಂಗದ ಪ್ರಮುಖರು, ಸಚಿವ ಹೆಚ್‌ಡಿ ಕುಮಾರಸ್ವಾಮಿ, ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕಾರಣಿಗಳು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm