ಬ್ರೇಕಿಂಗ್ ನ್ಯೂಸ್
20-09-26 03:32 pm HK News Staffer ಕರ್ನಾಟಕ
ಮೈಸೂರು, ಸೆಪ್ಟೆಂಬರ್ 20: ಟಿ. ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಟಿ. ನರಸೀಪುರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ತನಿಖೆ ಆರಂಭಿಸಿದ್ದಾರೆ.
ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ BNS ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಸೇವಕರು ಹಾಗೂ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ, ವಿವಿಧ ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷ ಅಥವಾ ವೈಮನಸ್ಸು ಉತ್ತೇಜಿಸುವಂತಹ ಹೇಳಿಕೆಗಳು, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡುವ ಆರೋಪ, ಪ್ರಚೋದನಕಾರಿ ಭಾಷಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪಗಳನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ನೀಡಿದ್ದ ಸೂಚನೆಗಳ ಹಿನ್ನೆಲೆಯಲ್ಲಿ ವಿವಾದ ಉಂಟಾಗಿತ್ತು. ಹಿಂದೂ ಮಹಾಸಭಾ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರತಾಪ್ ಸಿಂಹ ನೇತೃತ್ವದಲ್ಲಿ ಶುಕ್ರವಾರ ಗಣೇಶ ಶೋಭಾಯಾತ್ರೆ ನಡೆಸಿದ್ದರು. ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರು ಪೊಲೀಸರ ಕ್ರಮದ ಕುರಿತು ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ್ದರು.
ಶೋಭಾಯಾತ್ರೆ ವೇಳೆ ಗಣೇಶ ಮೂರ್ತಿಯನ್ನು ಮಸೀದಿ ಮುಂಭಾಗದಲ್ಲಿ ನಿಲ್ಲಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರತಾಪ್ ಸಿಂಹ ಪ್ರಚೋದನಕಾರಿ ಮಾತನಾಡಿದ್ದು ಟಿ. ನರಸೀಪುರ ಠಾಣೆಯ ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ಏಕವಚನದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದರು. “ಹೇ ಧನಂಜಯ, ಮಸೀದಿ ಮುಂದೆ ಹೋದ್ರೆ ಎದ್ದು ಬಿಡುತ್ತಾ ಅಂದೇಯಲ್ಲಾ? ಬಾರೋ ಧನಂಜಯ ಇಲ್ಲಿಗೆ, ಬಂದು ನೋಡು ಬಾರೋ!” ಎಂದು ಸವಾಲಿನ ಧಾಟಿಯಲ್ಲಿ ಮಾತನಾಡಿದ್ದರು. ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕರೊಂದಿಗೆ ನಡೆದುಕೊಂಡ ರೀತಿಯನ್ನು ಪ್ರಶ್ನಿಸಿದ ಅವರು, “ಅಯೋಗ್ಯ ಧನಂಜಯ” ಎಂಬ ರೀತಿಯ ಕಟು ಪದಗಳನ್ನು ಬಳಸಿದ್ದರು ಎನ್ನಲಾಗಿದೆ. ಮುಂದಿನ ಒಂದೂವರೆ ವರ್ಷದಲ್ಲಿ ತಾವು ಅಧಿಕಾರಕ್ಕೆ ಬಂದರೆ ಲೆಕ್ಕ ಚುಕ್ತಾ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರತಾಪ್ ಸಿಂಹ ಅವರ ಹೇಳಿಕೆಗಳಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿತ್ತು. ಇದಾದ ಬಳಿಕ ಶೋಭಾಯಾತ್ರೆಯಲ್ಲಿ ನಡೆದ ಘಟನೆಗಳು ಹಾಗೂ ಭಾಷಣಗಳ ಕುರಿತು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಪ್ರತಾಪ್ ಸಿಂಹ ವಿರುದ್ಧ ಈಗಾಗಲೇ ಹಲವು ಪ್ರಕರಣಗಳಿವೆ, ಮತ್ತೊಂದು ಪ್ರಕರಣ ದಾಖಲಾಗಿರುವುದಕ್ಕೆ ಅವರು ಹೆದರುವುದಿಲ್ಲ ಎಂದು ಹೇಳಿದ್ದಾರೆ. “ಪ್ರತಾಪ್ ಸಿಂಹನಿಗೆ 25 ಕೇಸ್ ಇವೆ, ಮತ್ತೊಂದು ಕೇಸ್ ಅಷ್ಟೇ. ಇದಕ್ಕೆ ಪ್ರತಾಪ್ ಸಿಂಹ ಹೆದರಲ್ಲ” ಎಂದು ಅವರು ಹೇಳಿದ್ದಾರೆ. ಇನ್ಸ್ಪೆಕ್ಟರ್ ವಿರುದ್ಧವೂ ವಿವಿಧ ಆರೋಪಗಳಿವೆ ಎಂದು ಹೇಳಿದ ಆರ್. ಅಶೋಕ್, “ನೀವು ಇರೋದು ಒಂದು ವರ್ಷ. ಎಷ್ಟು ಕುಣಿತಿರಿ ಕುಣಿರಿ. ನಾವು ಬಗ್ಗಲ್ಲ, ಜಗ್ಗಲ್ಲ. ಗೊತ್ತು ಗುರಿ ಇಲ್ಲದ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.
An FIR has been registered against former Mysuru MP Pratap Simha and several others in connection with alleged provocative remarks made during a Ganesh Shobhayatra in T Narasipura. The T Narasipura police registered a suo motu case and launched an investigation under several provisions of the Bharatiya Nyaya Sanhita (BNS).
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm