ಬ್ರೇಕಿಂಗ್ ನ್ಯೂಸ್
22-09-26 08:58 pm HK News Staffer ಕರ್ನಾಟಕ
ಬೆಂಗಳೂರು, ಸೆ.22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ತೀವ್ರ ಆರ್ಥಿಕ ಮುಗ್ಗಟ್ಟು ಮತ್ತು ಬಜೆಟ್ ಕೊರತೆಯನ್ನು ಎದುರಿಸುತ್ತಿದೆ. ಇತ್ತೀಚೆಗೆ ರಾಜ್ಯ ಹಣಕಾಸು ಇಲಾಖೆಯು ಹೊಸದಾಗಿ ಯಾವುದೇ ದೊಡ್ಡ ವೆಚ್ಚದ ಯೋಜನೆಗಳನ್ನು ಘೋಷಿಸದಂತೆ ಮತ್ತು ಹಣಕಾಸು ವಿಚಾರದಲ್ಲಿ ವಾಸ್ತವಿಕ ನಿಲುವು ತಳೆಯುವಂತೆ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ಪತ್ರ ರವಾನಿಸಿದೆ.
ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮುಂತಾದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ ₹50,000 ರಿಂದ ₹60,000 ಕೋಟಿ ವೆಚ್ಚವಾಗುತ್ತಿದ್ದು, ಇದರಿಂದ ಬೊಕ್ಕಸಕ್ಕೆ ಭಾರಿ ಪ್ರಮಾಣದ ಆರ್ಥಿಕ ಒತ್ತಡ ಉಂಟಾಗಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಘೋಷಿಸಿದ ₹10,000 ಕೋಟಿ ವೆಚ್ಚದ 'ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ'ಗೆ ಬಜೆಟ್ನಲ್ಲಿ ಅನುದಾನ ಮೀಸಲಿಡದ ಕಾರಣ ಹಣಕಾಸು ಇಲಾಖೆ ಸದ್ಯಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದೆ. ಕರ್ನಾಟಕ ಸರ್ಕಾರವು 2025-26ರ ಸಾಲಿನಲ್ಲಿ ₹1.16 ಲಕ್ಷ ಕೋಟಿ ಸಾಲ ಪಡೆದಿದ್ದು, ಇದು ಹಿಂದಿನ ವರ್ಷಕ್ಕಿಂತ ₹11,000 ಕೋಟಿ ಹೆಚ್ಚಾಗಿದೆ. ರಾಜ್ಯವು ಸಾಲ ಪಡೆಯುವ ಗರಿಷ್ಠ ಮಿತಿಯನ್ನು ಈಗಾಗಲೇ ತಲುಪಿದೆ ಎಂದು ಇಲಾಖೆ ಎಚ್ಚರಿಸಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ ಅಡಿ 15,000 ಕಿ.ಮೀ ರಸ್ತೆಗಳನ್ನು 10 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗೆ ಅನುದಾನದ ಪ್ರಸ್ತಾಪ ಇಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ, ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ವಸ್ತುಸ್ಥಿತಿಯನ್ನು ಉಲ್ಲೇಖಿಸಿದೆ.
ಹಣಕಾಸು ಇಲಾಖೆಯ ಆಕ್ಷೇಪ ಏನು?
2026-27 ಹಾಗೂ 2027-28 ನೇ ಸಾಲಿನಲ್ಲಿ ಹಲವು ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ. ಇದಕ್ಕಾಗಿ ಸುಮಾರು 1000 ಕೋಟಿ ವೆಚ್ಚದ ಬೇಡಿಕೆ ಮುಂದಿಡಲಾಗಿದೆ. ಆದರೆ ಇದಕ್ಕೆ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿಲ್ಲ. ಇದು ವಿತ್ತೀಯ ನಿರ್ವಹಣೆ ಹಾಗೂ ಹಣದ ಹರಿವಿನ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ರಾಜ್ಯ ಸರ್ಕಾರ ಈಗಾಗಲೇ ತನ್ನ ಸಾಲ ಪಡೆಯುವ ಗರಿಷ್ಠ ಮಿತಿಯನ್ನು ಮುಟ್ಟಿದೆ. ಹೀಗಾಗಿ ಹೊಸ ಯೋಜನೆಗಳಿಗೆ ಸಾಲ ಪಡೆಯುವ ಅವಕಾಶ ಇಲ್ಲ ಎಂದು ಹೇಳಿದೆ.
ರಾಜ್ಯದಲ್ಲಿ ಸುಮಾರು ಎರಡು ಲಕ್ಷ ಕೋಟಿ ವೆಚ್ಚದ ಕಾಮಗಾರಿಗಳು ಬಾಕಿ ಇವೆ. ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಒಟ್ಟು 36,136 ಕೋಟಿ ಬಾಕಿ ಬಿಲ್ ಹೊಂದಿವೆ. ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬಜೆಟ್ ಹಂಚಿಕೆಯನ್ನು ಮೀರಿ ಹೆಚ್ಚುವರಿ ಅನುದಾನದ ಅಗತ್ಯತೆ ಇದೆ. ಬರದಿಂದಾಗಿ ಕೃಷಿ ಪಂಪ್ ಸೆಟ್ ಗಳ 4 -5 ಸಾವಿರ ಕೋಟಿ ಸಹಾಯ ಧನ ನೀಡುವುದು ಬಾಕಿ ಉಳಿದುಕೊಂಡಿದೆ. ಹಾಗಾಗಿ ಹೊಸ ಯೋಜನೆಗಳಿಗೆ ಅನುದಾನ ಕೊಡಬೇಕಾದರೆ, ಈಗಾಗಲೇ ಬಜೆಟ್ ನಲ್ಲಿ ಎಲ್ಲಾ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಅನುದಾನಗಳನ್ನು ಕಡಿತಗೊಳಿಸಬೇಕಾಗಿದೆ.
ಇದರಿಂದಾಗಿ ಕಾಮಗಾರಿಗಳು ಸ್ಥಗಿತವಾಗುವ ಅಥವಾ ವಿಳಂಬ ಆಗುವ ಆತಂಕ ಇದೆ. ರಸ್ತೆ ಸಾರಿಗೆ ನಿಗಮಗಳು, ನೀರಾವರಿ ನಿಗಮ ಹಾಗೂ ಎಸ್ಕಾಂ ಸಿಬ್ಬಂದಿಗೆ ವೇತನ ನೀಡಲು ಹಣಕಾಸಿನ ಕೊರತೆ ಎದುರಾಗಿದೆ. ಮಾಸಿಕ ಪಿಂಚಣಿ ಪಾವತಿಯಲ್ಲೂ ವಿಳಂಬ ಆಗುತ್ತಿದೆ ಎಂದು ಹಣಕಾಸು ಇಲಾಖೆ ವಿವರ ನೀಡಿದೆ. ಈ ವಿಚಾರ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪಗೊಂಡು ವಿಪಕ್ಷಗಳ ಟೀಕೆಗೆ ಗುರಿಯಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm