ಬ್ರೇಕಿಂಗ್ ನ್ಯೂಸ್
23-09-26 05:14 pm HK News Staffer ಕರ್ನಾಟಕ
ವಿಜಯಪುರ, ಸೆ.23 : ಬರಪೀಡಿತ ತಾಲೂಕು ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸೇರಿಸದಿರುವ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭೆ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಈ ಕುರಿತು ಮಾಹಿತಿ ನೀಡಿದ್ದಾರೆ.
2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಂಡಿ ತಾಲೂಕು ತೀವ್ರ ಬರ ಪರಿಸ್ಥಿತಿಗೆ ತುತ್ತಾಗಿದೆ. ಆರಂಭದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ ಬಳಿಕ ಸಕಾಲಕ್ಕೆ ಮಳೆಯಾಗದೆ ಬೆಳೆಗಳು ಒಣಗಿ ಹೋಗಿದ್ದು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ ಎಂದು ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ವಿವರಿಸಿದ್ದಾರೆ.
ಇಂಡಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಆಗಸ್ಟ್ 28ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿತ್ತು. ಹಲವು ಬಾರಿ ಮನವಿ ಮಾಡಿದರೂ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈವರೆಗೆ ಹಂತ ಹಂತವಾಗಿ ಒಟ್ಟು 188 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಸೆಪ್ಟೆಂಬರ್ 22ರಂದು 11 ತಾಲೂಕುಗಳನ್ನು ಹೆಚ್ಚುವರಿಯಾಗಿ ಪಟ್ಟಿಗೆ ಸೇರಿಸಿದ್ದು, 188ಕ್ಕೆ ಏರಿಕೆಯಾಗಿತ್ತು. ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳು ಮಾತ್ರ ಪಟ್ಟಿಯಿಂದ ಹೊರಗುಳಿದಿವೆ ಎಂದು ವರದಿಗಳು ತಿಳಿಸಿವೆ.
ಆಡಳಿತ ಪಕ್ಷದ ಶಾಸಕರಾಗಿರುವ ತಾವು ಸರ್ಕಾರಕ್ಕೆ ಮುಜುಗರ ಉಂಟಾಗದಂತೆ ಹಲವು ಬಾರಿ ಮನವಿ ಮಾಡಿದ್ದರೂ ತಮ್ಮ ಕ್ಷೇತ್ರದ ಜನರ ಮಾತು ಹಾಗೂ ಭಾವನೆಗಳಿಗೆ ಬೆಲೆ ಸಿಗುತ್ತಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದಿನ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಹಾಗೂ ಒತ್ತಡ ತಂತ್ರ ಅನುಸರಿಸುವವರಿಗೆ ಮನ್ನಣೆ ಸಿಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್ಗೆ ಮನವಿ ಮಾಡಿದ್ದಾರೆ. ಯಶವಂತರಾಯಗೌಡ ಪಾಟೀಲ್ ಅವರು ಇದಕ್ಕೂ ಮೊದಲು ಕಳೆದ ಆಗಸ್ಟ್ನಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ನಾಯಕರು ಹಾಗೂ ಬೆಂಬಲಿಗರ ಮನವೊಲಿಕೆಯ ನಂತರ ರಾಜೀನಾಮೆಯನ್ನು ವಾಪಸ್ ಪಡೆದಿದ್ದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm