ಬ್ರೇಕಿಂಗ್ ನ್ಯೂಸ್
27-09-26 03:21 pm HK News Desk ಕರ್ನಾಟಕ
ಬೆಂಗಳೂರು, ಸೆ.27: ವಿಭಿನ್ನ ಬೀಟ್ ಶೈಲಿ ಹಾಗೂ ಅದ್ಭುತ ವಾದನದ ಮೂಲಕ ದಕ್ಷಿಣ ಭಾರತದ ಸಂಗೀತಾಸಕ್ತರ ಮನಗೆದ್ದಿದ್ದ ಜನಪ್ರಿಯ ‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ‘ಸ್ಕಂದಶ್ರೀ ಅಪಾರ್ಟ್‌ಮೆಂಟ್’ ನಿವಾಸದಲ್ಲಿ ಕೊನೆಯುಸಿರೆಳೆದ ದೇವ್, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗ ಸೇರಿದಂತೆ ಹಲವು ಬೃಹತ್ ಸಂಗೀತ ಸಂಜೆ ಹಾಗೂ ವೇದಿಕೆಗಳಲ್ಲಿ ತಮ್ಮದೇ ಆದ ವಿಶಿಷ್ಟ ಸಂಗೀತದ ಛಾಪು ಮೂಡಿಸಿದ್ದ ದೇವ್, ಡ್ರಮ್ಸ್ ಬಾರಿಸುವ ಕ್ರೇಜ್‌ನಿಂದಾಗಿಯೇ ‘ಕನ್ನಡದ ಶಿವಮಣಿ’ ಎಂದು ಖ್ಯಾತಿ ಪಡೆದಿದ್ದರು. ವಿಶೇಷವಾಗಿ ಐಪಿಎಲ್ ಕ್ರಿಕೆಟ್ ಸರಣಿ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಆರ್‌ಸಿಬಿ’ ಪಂದ್ಯಗಳ ಸಂದರ್ಭದಲ್ಲಿ ಇವರು ನೀಡುತ್ತಿದ್ದ ಲೈವ್ ಬೀಟ್ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸುತ್ತಿತ್ತು.
ಕಳೆದ ಜೂನ್ ತಿಂಗಳಲ್ಲಿ ದೇವ್ ಅವರಿಗೆ ಪಾರ್ಶ್ವವಾಯು ಕಾಣಿಸಿಕೊಂಡಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತ ಬಂದಿತ್ತು. ಈ ನಡುವೆ ತೀವ್ರ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆ ನಡೆಸಿ ಬಲಗಾಲನ್ನು ಕತ್ತರಿಸಲಾಗಿತ್ತು. ಬಳಿಕ ಪಾರ್ಶ್ವವಾಯು ರೋಗದ ತೀವ್ರತೆಯಿಂದ ಚೇತರಿಸಿಕೊಳ್ಳಲಾಗದೆ ತಮ್ಮ ನಿವಾಸದಲ್ಲೇ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಬೆಳಗ್ಗೆ ದಿಢೀರ್ ಅಸ್ವಸ್ಥರಾಗಿ ಕೊನೆಯುಸಿರೆಳೆದಿದ್ದಾರೆ. ದೇವ್ ಅವರ ಅಕಾಲಿಕ ಅಗಲಿಕೆಗೆ ಸ್ಯಾಂಡಲ್‌ವುಡ್ ತಾರೆಯರು, ಸಂಗೀತ ನಿರ್ದೇಶಕರು, ಅಪಾರ ಕಲಾಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.
Popular drummer Dev, fondly known as the ‘Kannada Shivamani’ for his distinctive beats and exceptional drumming skills, passed away on Sunday following prolonged illness. He breathed his last at his residence at Skandashree Apartment in Rajarajeshwari Nagar, Bengaluru. He is survived by a son and a daughter.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm