ಬ್ರೇಕಿಂಗ್ ನ್ಯೂಸ್
07-10-26 09:16 pm HK News Staffer ಕರ್ನಾಟಕ
ಬೆಂಗಳೂರು, ಅ.7: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸಚಿವರಿಗೆ ಸ್ಟಿಂಗ್ ಆಪರೇಷನ್‌ಗಳ ಬಗ್ಗೆ ಎಚ್ಚರ ಹೊಂದಿರಬೇಕು ಎಂಬ ಸೂಚನೆ ನೀಡಿದ್ದಾರೆಂಬ ವರದಿಗಳ ಬೆನ್ನಲ್ಲೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ಆರೋಪಗಳನ್ನು ಮಾಡಿದ್ದಾರೆ. ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್ ವಿಡಿಯೋ ನೀಡಿಯೇ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಚಿವರ ಮೇಲೆಯೇ ಸ್ಟಿಂಗ್ ಆಪರೇಷನ್ ನಡೆಸುವ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು. ಸಚಿವರ ಮೇಲೆ ಮುಖ್ಯಮಂತ್ರಿ ನಂಬಿಕೆ ಇಟ್ಟಿಲ್ಲವೇ? ಸಚಿವ ಸಂಪುಟದಲ್ಲಿ ಕುಳಿತು ಮಾತನಾಡುವ ವಿಚಾರಗಳೂ ರಹಸ್ಯವಾಗಿ ದಾಖಲಾಗುತ್ತಿವೆಯೇ ಎಂದು ಆಕ್ಷೇಪ ವ್ಯಕ್ತಪಡಿಸಿದರು. “ನನಗೆ ಮಾಹಿತಿ ಬರುತ್ತಿದೆ” ಎಂದು ಸಿಎಂ ಹೇಳುತ್ತಿದ್ದಾರೆ. ಸಚಿವರನ್ನು ಸ್ಟಿಂಗ್ ಮಾಡಿ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
‘ಸಚಿವರನ್ನು ಮುಷ್ಠಿಯಲ್ಲಿ ಇಟ್ಟುಕೊಳ್ಳುವ ತಂತ್ರ’
ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ನಡೆಸುತ್ತಿರುವುದು ನಿಜವಾಗಿದ್ದರೆ ಸರ್ಕಾರವೇ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು. “ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದಾದರೆ ಸರ್ಕಾರ ಕ್ರಮ ತೆಗೆದುಕೊಳ್ಳಲಿ” ಎಂಬ ರೀತಿಯಲ್ಲಿ ಪ್ರತಿಕ್ರಿಯಿಸಿದರು. ರಾಜಣ್ಣ ಪ್ರಕರಣದ ವಿಚಾರವನ್ನು ಪ್ರಸ್ತಾಪಿಸಿದ ಕುಮಾರಸ್ವಾಮಿ, ಆ ಪ್ರಕರಣದಲ್ಲಿ ವಿಡಿಯೋವನ್ನು ಯಾರು ಮಾಡಿಸಿದರು ಎಂಬ ಪ್ರಶ್ನೆ ಇನ್ನೂ ಇದೆ. ಇದೇ ರೀತಿಯಾಗಿ ಸುಮಾರು 40 ಜನರ ವಿಡಿಯೋಗಳಿವೆ ಎಂದು ಹಿಂದೆ ಸದನದಲ್ಲಿ ಹೇಳಲಾಗಿತ್ತು ಎಂದು ಅವರು ಉಲ್ಲೇಖಿಸಿದರು.
‘ಪ್ರಮುಖ ನಾಯಕರ ವಿಡಿಯೋಗಳು ಓಡಾಡುತ್ತಿದ್ದವು’
ಪ್ರಮುಖ ನಾಯಕರ ವಿಡಿಯೋಗಳು ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದೀಗ ಅವುಗಳ ಪ್ರಸಾರ ನಿಂತಿರುವುದೇಕೆ ಎಂಬ ಪ್ರಶ್ನೆಯನ್ನೂ ಕುಮಾರಸ್ವಾಮಿ ಎತ್ತಿದರು. ಈ ವಿಷಯವನ್ನು ಕಾಂಗ್ರೆಸ್‌ನವರೇ ಪ್ರಸ್ತಾಪಿಸಿರುವುದಾದರೆ, ಏಕೆ ಪ್ರಸ್ತಾಪಿಸಿದ್ದಾರೆ ಎಂಬುದನ್ನು ಮುಖ್ಯಮಂತ್ರಿಯವರನ್ನೇ ಕೇಳಬೇಕು ಎಂದರು. ಯಾವ ಸಚಿವರು ಸ್ಟಿಂಗ್ ಆಪರೇಷನ್ ಗುರಿಯಾಗಿದ್ದಾರೆ ಎಂಬುದನ್ನು ಸಿಎಂ ಹೇಳಿದ್ದಾರೆ. ಹಿಂದೆ ಕೆಲವು ವಿಡಿಯೋಗಳಿಗೆ ನ್ಯಾಯಾಲಯದ ತಡೆಯಾಜ್ಞೆ ಬಂದಿತ್ತು. ಇತ್ತೀಚೆಗೆ ನೇಪಾಳ ಸೇರಿದಂತೆ ಹಲವು ವಿಚಾರಗಳ ಕುರಿತು ಕೇಳಿಬಂದ ಹೇಳಿಕೆಗಳಿಗೂ ಈ ಸ್ಟಿಂಗ್ ಆಪರೇಷನ್‌ಗೂ ಸಂಬಂಧವಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದರು.
‘ನನ್ನ ಕಾಲದಲ್ಲಿ ಇಂತಹ ಚರ್ಚೆ ಇರಲಿಲ್ಲ’
ತಮ್ಮ ರಾಜಕೀಯ ಅವಧಿಯಲ್ಲಿ ಅಭಿವೃದ್ಧಿ ವಿಚಾರಗಳ ಹೊರತಾಗಿ ಇಂತಹ ವಿಷಯಗಳು ಚರ್ಚೆಯಾಗುತ್ತಿರಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಇಂತಹ ಚರ್ಚೆಗಳು ಹೆಚ್ಚಾಗಿವೆ ಎಂದು ಟೀಕಿಸಿದರು. ಸಚಿವರ ಮೇಲೆ ಖಾಸಗಿ ಏಜೆನ್ಸಿಗಳ ಮೂಲಕ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎಂಬ ವರದಿಗಳು ಹೊರಬಂದಿವೆ. ಸಚಿವರ ಖಾಸಗಿ ಭೇಟಿಗಳು, ಹೋಟೆಲ್‌ಗಳಲ್ಲಿ ನಡೆಯುವ ಮಾತುಕತೆಗಳು ಹಾಗೂ ಅಪರಿಚಿತರೊಂದಿಗೆ ಸಂಪರ್ಕದ ವೇಳೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.
Union Minister H.D. Kumaraswamy has questioned Chief Minister D.K. Shivakumar over reports that ministers were warned about possible sting operations, and alleged that Shivakumar himself had used a sting operation to secure the chief minister’s post.
07-10-26 09:16 pm
HK News Staffer
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm