ಬ್ರೇಕಿಂಗ್ ನ್ಯೂಸ್
30-10-26 05:15 pm HK News Staffer ಕರ್ನಾಟಕ
ಬೆಂಗಳೂರು, ಅ.30: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧಿಸಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ದೆಹಲಿಯ ಅಧಿಕೃತ ಗೃಹ ಕಚೇರಿಯಲ್ಲಿ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಮಹಜರ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲು ಪಾತ್ರ ವಹಿಸಿದ್ದ ಆರೋಪದ ಮೇರೆಗೆ ದೆಹಲಿಯ ರಿತೇಶ್ ಪಾಂಡೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆತ ನೀಡಿದ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಮಹಜರ್ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್ ವಿರುದ್ಧ ಕುಮಾರಸ್ವಾಮಿ, ಡಿಕೆಶಿ ಸರ್ಕಾರವನ್ನು ಗುರಿಯಾಗಿಸಿ ಗುಡುಗಿದ್ದರು. ಜೆಡಿಎಸ್ ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಕ್ಕೆ ತೀವ್ರ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾನೆ ಎಂಬ ಆರೋಪದಲ್ಲಿ ದೆಹಲಿಯ ರಿತೇಶ್ ಪಾಂಡೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ಆತನ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಮಹಜರು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಕುಮಾರಸ್ವಾಮಿ ಅವರ ದೆಹಲಿ ಗೃಹ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕಂಟೆಂಟ್ ಕ್ರಿಯೇಟರ್ ಆಗಿ ಪಾಂಡೆ ಕೆಲಸ ಮಾಡುತ್ತಿದ್ದು, ಆತನಿಗೆ ಮಾಸಿಕ 50 ಸಾವಿರ ರೂ. ವೇತನ ನಿಗದಿಯಾಗಿತ್ತು ಎಂದು ವರದಿಯಾಗಿತ್ತು.
ಕೆಲ ದಿನಗಳ ಹಿಂದೆ ಎರಡು ಮೊಬೈಲ್‌ಗಳನ್ನು ಖರೀದಿಸಿ ತರುವಂತೆ ಆತನಿಗೆ ಪ್ರಜ್ವಲ್ ಪ್ರಸಾದ್ ಎಂಬಾತ 30 ಸಾವಿರ ರು. ನೀಡಿ ಸೂಚಿಸಿದ್ದ. ಅಂತೆಯೇ ದೆಹಲಿಯ ಕರೋಲ್‌ಬಾಗ್‌ನಲ್ಲಿ ತಲಾ 15 ಸಾವಿರ ರು.ಗೆ ಎರಡು ಹಳೆಯ ಮೊಬೈಲ್‌ಗಳನ್ನು ಖರೀದಿಸಿ ತಂದಿದ್ದ. ಇದೇ ಮೊಬೈಲ್‌ಗಳನ್ನು ಬಳಸಿ ಸ್ಟಿಂಗ್ ವಿಡಿಯೋಗಳನ್ನು ಅಪ್ ಲೋಡ್ ಮಾಡಲಾಗಿತ್ತು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಅಲ್ಲದೆ ತನ್ನ ಫೇಸ್‌ಬುಕ್ ಖಾತೆಯಲ್ಲಿಯೂ ವಿಡಿಯೋಗಳನ್ನು ಆತ ಹಂಚಿಕೊಂಡಿದ್ದ. ಹೀಗಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ದೆಹಲಿ ಕಚೇರಿಯಲ್ಲಿ ಆರೋಪಿಯನ್ನು ಕರೆದೊಯ್ದು ಮಹಜರು ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.
30-10-26 05:15 pm
HK News Staffer
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
30-10-26 12:51 pm
HK News Staffer
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
30-10-26 05:16 pm
HK News Staffer
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಬೆಂಗಳೂ...
30-10-26 05:13 pm
ಶಿವಮೊಗ್ಗದಿಂದ ಮಂಗಳೂರಿಗೆ 1.15 ಕೋಟಿ ನಗದು ರವಾನೆ ;...
29-10-26 11:02 pm
ಫರಂಗಿಪೇಟೆ ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ ;...
29-10-26 01:14 pm
Kedila Society, Keshav Gowda, Blackmail: ಮುಸ್...
29-10-26 12:14 pm