ಬ್ರೇಕಿಂಗ್ ನ್ಯೂಸ್
18-11-26 05:38 pm HK News Staffer ಕರ್ನಾಟಕ
ಬೆಂಗಳೂರು, ನ.18: ನಗರದ ಹೃದಯಭಾಗದಲ್ಲಿರುವ ಪ್ರತಿಷ್ಠಿತ ಬೆಂಗಳೂರು ಟರ್ಫ್ ಕ್ಲಬ್ ಜಾಗದಲ್ಲಿ ರಾಜ್ಯ ಸರ್ಕಾರದ ಪ್ರಮುಖ ಇಲಾಖೆಗಳ ಕಚೇರಿಗಳನ್ನು ಒಳಗೊಂಡ ಬೃಹತ್ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ನಗರದ ಸಂಚಾರ ದಟ್ಟಣೆಯನ್ನು ತಗ್ಗಿಸುವ ಮತ್ತು ಆಡಳಿತ ಯಂತ್ರಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು ರೇಸ್ ಕೋರ್ಸ್ ಆಸ್ತಿಯ ಒಟ್ಟು 79.14 ಎಕರೆ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಮುಂದಾಗಿದೆ. ಇದರಂತೆ ನಗರದ ಪ್ರಮುಖ ಸರ್ಕಾರಿ ಕಚೇರಿಗಳನ್ನೆಲ್ಲ ಒಂದೇ ಸ್ಥಳದಲ್ಲಿ ಹೊಂದಿಸಿ ಬಹುಮಹಡಿ ಕಟ್ಟಡ ನಿರ್ಮಿಸಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಟ್ಟಡದ ವಿನ್ಯಾಸ ಮತ್ತು ನಿರ್ಮಾಣ ವೆಚ್ಚ ಇನ್ನೂ ಅಂತಿಮವಾಗಿಲ್ಲ. ಸರ್ಕಾರಿ ಇಲಾಖೆಗಳ ನಡುವೆ ಮಾಹಿತಿ ವಿನಿಮಯ ವೇಗಗೊಳಿಸುವುದು ಹಾಗೂ ಆಡಳಿತದ ಕಾರ್ಯಕ್ಷಮತೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ, ರಾಜಧಾನಿ ದೆಹಲಿಯಲ್ಲಿಯೂ ಹಲವು ಸರ್ಕಾರಿ ಕಚೇರಿಗಳು ಒಂದೇ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿಯೂ ಇದೇ ಮಾದರಿಯನ್ನು ಅನುಸರಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ನಗರದ ಮಧ್ಯೆ ನ್ಯಾಯಾಲಯ ಸಂಕೀರ್ಣ ನಿರ್ಮಿಸಲು 7ರಿಂದ 8 ಎಕರೆ ಜಮೀನು ನೀಡಲು ನಿರ್ಧರಿಸಲಾಗಿದೆ. ಇದು ಹಾಲಿ ಕರ್ನಾಟಕ ಹೈಕೋರ್ಟ್ ಕಟ್ಟಡದ ವಿಸ್ತರಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಆಡಳಿತ ಸಂಕೀರ್ಣದಲ್ಲಿ ಸಾರಿಗೆ, ಆರೋಗ್ಯ, ಇಂಧನ ಮತ್ತು ಮಹಾನಗರ ಪಾಲಿಕೆ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳು ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ.
ಪ್ರಸ್ತುತ ಇಲಾಖೆಗಳ ಕಚೇರಿಗಳು ಕಾರ್ಯ ನಿರ್ವಹಿಸುತ್ತಿರುವ ಕಟ್ಟಡಗಳನ್ನು ಖಾಸಗಿ ಕಂಪನಿಗಳಿಗೆ ಗುತ್ತಿಗೆ ಅಥವಾ ಬಾಡಿಗೆಗೆ ನೀಡುವ ಉದ್ದೇಶವಿದೆ. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಮಂಡಳಿ ಮತ್ತು ನಿಗಮಗಳ ಕಚೇರಿಗಳಿಗಾಗಿ ಕೆಲವು ಕಟ್ಟಡಗಳನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್‌ಗೆ ನೀಡಲಾಗಿರುವ ನಾಲ್ಕು ಎಕರೆ ಜಮೀನಿನ 30 ವರ್ಷಗಳ ಗುತ್ತಿಗೆಯನ್ನು ವಿಸ್ತರಿಸಲು ಸರ್ಕಾರ ಒಪ್ಪಿಗೆ ನೀಡಿತ್ತು. ಉಳಿದ 79.14 ಎಕರೆ ಜಮೀನನ್ನು ವಾಪಸ್ ಪಡೆಯಲು ನಿರ್ಧರಿಸಿತ್ತು. ಈ ಜಾಗದಲ್ಲಿರುವ ರಾಜ್ಯ ಪುರಾತತ್ವ ಇಲಾಖೆಯ ರಕ್ಷಣೆಯಲ್ಲಿರುವ ಪಾರಂಪರಿಕ ಕಟ್ಟಡವನ್ನು ಯಾವುದೇ ರೀತಿಯಲ್ಲಿ ಬದಲಾಯಿಸದಿರಲು ಸರ್ಕಾರ ಒಪ್ಪಿಕೊಂಡಿದೆ. ಈ ಹಿಂದೆ ಕುದುರೆ ಓಟದ ಚಟುವಟಿಕೆಗಳನ್ನು 110 ಎಕರೆ ವಿಸ್ತೀರ್ಣದ ಕುಣಿಗಲ್ ಸ್ಟಡ್ ಫಾರ್ಮ್‌ಗೆ ಸ್ಥಳಾಂತರಿಸುವುದಾಗಿ ಸರ್ಕಾರ ಘೋಷಿಸಿತ್ತು.
ಮೂರು ವರ್ಷಗಳ ಹಿಂದೆ ನಗರದ ಕೇಂದ್ರ ವಾಣಿಜ್ಯ ಪ್ರದೇಶದಲ್ಲಿ (ಸಿಬಿಡಿ) ಎಲ್ಲ ಸರ್ಕಾರಿ ಕಚೇರಿಗಳಿಗಾಗಿ ಬಹುಮಹಡಿ ಕಟ್ಟಡ ನಿರ್ಮಿಸಲು ಸರ್ಕಾರ ಮುಂದಾಗಿತ್ತು. ಆದರೆ ಸೂಕ್ತ ಜಮೀನು ಗುರುತಿಸುವುದು ಸವಾಲಾಗಿತ್ತು ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
18-11-26 07:26 pm
HK News Staffer
ರೇಸ್ ಕೋರ್ಸ್ ವ್ಯಾಪ್ತಿಯ 79 ಎಕರೆ ಸರ್ಕಾರದ ವಶಕ್ಕೆ...
18-11-26 05:38 pm
ಕೆಪಿಎಸ್ಸಿ ಅಕ್ರಮ ನೇಮಕಾತಿ ಹಗರಣ ; ಆಯೋಗದ ಅಧ್ಯಕ್ಷ...
17-11-26 12:09 pm
ಆಟವಾಡುತ್ತಿದ್ದ ವೇಳೆ ದುರಂತ ; ಬಿಸಿ ಕೆಮಿಕಲ್ ಬಕೆಟ್...
14-11-26 09:24 pm
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
18-11-26 07:27 pm
HK News Staffer
Bolas Factory Raid, Mangalore: ಗ್ರಾಹಕರನ್ನು ದಾ...
18-11-26 01:18 pm
Ideal Icecream Raid, Mangalore: ಕೊಲ್ಯ ಐಡಿಯಲ್...
17-11-26 08:15 pm
ಸೌಜನ್ಯಾ ಪ್ರಕರಣ ; ಮೂವರು ತಜ್ಞ ವೈದ್ಯರ ಕಮಿಟಿ ರಚನೆ...
17-11-26 06:42 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ರೆಕಾರ್ಡ್ ಮಾಡಿದ್ದ...
17-11-26 03:15 pm
18-11-26 07:20 pm
HK News Staffer
ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ...
18-11-26 12:46 pm
ಬಂಟ್ವಾಳದಲ್ಲಿ ವ್ಯಾಪಾರಿ ಅಡ್ಡಗಟ್ಟಿ ಎಂಟು ಲಕ್ಷ ದರೋ...
18-11-26 12:36 pm
ಕೇರಳದಲ್ಲಿ ಟ್ರಾಫಿಕ್ ಉಲ್ಲಂಘನೆ ದಂಡ ; ಇ-ಚಲನ್ ಏಪ್...
16-11-26 09:56 pm
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm