ಸ್ಟಿಂಗ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್, ಜನಪ್ರತಿನಿಧಿಗಳ ತೇಜೋವಧೆ ; ರಾಕೇಶ್ ಶೆಟ್ಟಿ, ಸುದ್ದಿವಾಹಿನಿ ನೌಕರರ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

23-11-26 12:02 pm       HK News Staffer   ಕರ್ನಾಟಕ

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ ಗೌರವಕ್ಕೆ ಧಕ್ಕೆ ಬರುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ಥ ರಾಕೇಶ್ ಶೆಟ್ಟಿ ಮತ್ತು ಸಂಸ್ಥೆಯ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು, ನ.23: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ ಗೌರವಕ್ಕೆ ಧಕ್ಕೆ ಬರುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ಥ ರಾಕೇಶ್ ಶೆಟ್ಟಿ ಮತ್ತು ಸಂಸ್ಥೆಯ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರಿಗೆ ಪತ್ರ ಬರೆದಿದ್ದಾರೆ. 

ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ರಾಕೇಶ್ ಶೆಟ್ಟಿ ಮತ್ತು ಸುದ್ದಿವಾಹಿನಿ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು ಸರಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಮಾಡಲು ಪ್ರಚೋದಿಸಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ರಾಕೇಶ್ ಶೆಟ್ಟಿ ಮತ್ತು ಸುದ್ದಿವಾಹಿನಿಯ ನೌಕರರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸುರೇಶ್‌ಬಾಬು ಪತ್ರದಲ್ಲಿ ಕೋರಿದ್ದರು. ಅವರ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳ ಕುರಿತು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಂಡು, ಅದರ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಸೂಚಿಸಿದ್ದಾರೆ.