ಬ್ರೇಕಿಂಗ್ ನ್ಯೂಸ್
12-01-21 12:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.12: ರಾಜ್ಯದಲ್ಲಿ ಜ. 16ರಿಂದ 16.90 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕುವ ಅಭಿಯಾನ ಆರಂಭವಾಗಲಿದ್ದು, ಇದಕ್ಕಾಗಿ 235 ಲಸಿಕಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಲಸಿಕೆ ವಿತರಣೆ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಕೊರೋನಾ ಯೋಧರಾದ ಆರೋಗ್ಯ ಇಲಾಖೆ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು. 28 ದಿನಗಳ ಬಳಿಕ ಅವರಿಗೆ ಎರಡನೇ ಡೋಸ್ ನೀಡಲಾಗುವುದು ಎಂದರು.
ಕಾರ್ಯಪಡೆ ರಚನೆ:
ರಾಜ್ಯಕ್ಕೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡೂ ಮಾದರಿಯ ಲಸಿಕೆಗಳು ಬರಲಿವೆ.
ರಾಜ್ಯಮಟ್ಟದ ಎರಡು ಪ್ರಮುಖ ದಾಸ್ತಾನು ಮಳಿಗೆಗಳಿಂದ ಜಿಲ್ಲಾ ಮಟ್ಟಕ್ಕೆ ಪೂರೈಸಲು ಕೋಲ್ಡ್ ಚೈನ್ ವ್ಯವಸ್ಥೆ ಮಾಡಿದ್ದೇವೆ. ಇವುಗಳನ್ನು ಸಮರ್ಪಕವಾಗಿ ನಿಗಾವಹಿಸಿ ಅನುಷ್ಠಾನಕ್ಕೆ ತರಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕಾರ್ಯಪಡೆ ರಚಿಸಿದ್ದೇವೆ ಎಂದು ಅವರು ವಿವರಿಸಿದರು.
45 ದಿನಗಳಲ್ಲಿ ರೋಗನಿರೋಧಕ ಶಕ್ತಿ- ಸುಧಾಕರ್:
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ಲಸಿಕೆ ಪಡೆದ ವ್ಯಕ್ತಿಯಲ್ಲಿ 45 ದಿನಗಳಲ್ಲಿ ಕೊರೋನಾ ಸೋಂಕಿನ ವಿರುದ್ಧದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. 45 ದಿನಗಳವರೆಗೂ ಲಸಿಕೆ ಪಡೆದವರು ಸಹ ಎಚ್ಚರವಾಗಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ ಎಂದು ತಿಳಿಸಿದರು.
ಕೊರೋನಾ ಯೋಧರ ಬಳಿಕ ಜನಸಾಮಾನ್ಯರಿಗೆ:
ಮೊದಲ ಹಂತದ ಕೊರೋನಾ ಲಸಿಕಾ ಅಭಿಯಾನದಲ್ಲಿ ಕೊರೋನಾ ಯೋಧರಿಗೆ ಮೊದಲ ಆದ್ಯತೆ ನೀಡಲಾಗುವುದು. ಕೊರೋನಾ ಯೋಧರ ಬಳಿಕ ಜನಸಾಮಾನ್ಯರಿಗೆ ಲಸಿಕೆ ನೀಡಲು ಕೇಂದ್ರ ಕ್ರಮ ಕೈಗೊಳ್ಳಲಿದೆ. ಈ ವೇಳೆ 50 ವರ್ಷದೊಳಗಿನ ಅಥವಾ ಮೇಲ್ಪಟ್ಟದೀರ್ಘಕಾಲೀನ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಮೊದಲ ಆದ್ಯತೆಯಾಗಿ ಗುರುತಿಸಿ ಕೊರೋನಾ ಲಸಿಕೆ ನೀಡಲಾಗುವುದು. ಈ ಬಗ್ಗೆಯೂ ಪ್ರಧಾನಮಂತ್ರಿಗಳು ಸಲಹೆ ನೀಡಿದರು ಎಂದು ಹೇಳಿದರು. ಈ ಲಸಿಕೆಯು ಕ್ಲಿನಿಕಲ್ ಪರೀಕ್ಷೆಯಾಗಿದ್ದು, ಯಾವುದೇ ಅಪಾಯವಿಲ್ಲ. ಹೀಗಾಗಿ ಜನರು ಭಯ, ಆತಂಕವಿಲ್ಲದೆ ಸುರಕ್ಷಿತವಾಗಿ ಲಸಿಕೆ ಪಡೆಯಬಹುದು ಎಂದರು.
About 16 lakh frontline workers in Karnataka will be administered Covid-19 vaccine in the first phase starting from January 16, said Chief Minister B S Yediyurappa.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm