ಬ್ರೇಕಿಂಗ್ ನ್ಯೂಸ್
24-11-26 08:43 pm HK News Staffer ಕರ್ನಾಟಕ
ಹಾಸನ, ನ.24: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹಾಸನದಿಂದ ಬೆಂಗಳೂರಿನ ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾದರೂ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಹಾಸನ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಮುಂದುವರಿಯಲು ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಸಹ ಅವರು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಕುಮಾರಸ್ವಾಮಿ ಅವರ ಆರೋಪವನ್ನು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ತಳ್ಳಿ ಹಾಕಿದ್ದರು. “ನನ್ನ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸಂಪೂರ್ಣ ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ನನ್ನ ಪಿಎ ತಿಳಿಸಿದ್ದಾರೆ. ಈ ಬಗ್ಗೆ ತನಿಖೆಯಾಗಲಿ, ನಾನು ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದರು.
ಮತ್ತೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, “ನನ್ನ ಹೆಸರು ಮತ್ತು ಫೋನ್ ನಂಬರ್ ಬಳಸಿ ಎಐ ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ ಸೃಷ್ಟಿಸಿ ವೈರಲ್ ಮಾಡಲಾಗಿದೆ” ಎಂದು ಆರೋಪಿಸಿದ್ದರು.
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಕಲಿ ಚಾಟ್‌ಗಳ ಮೂಲದ ಕುರಿತು ತನಿಖೆ ನಡೆಸುತ್ತಿರುವ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು, ಈ ಸಂಬಂಧ ಮಾಹಿತಿ ಪಡೆಯಲು ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
24-11-26 08:43 pm
HK News Staffer
ಬಿಸ್ಲೆರಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ;...
23-11-26 09:23 pm
ಸ್ಟಿಂಗ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್, ಜನಪ್ರತಿನಿಧಿ...
23-11-26 12:02 pm
ಬಸವಣ್ಣ ಬಗ್ಗೆ ಅವಹೇಳನ ಆರೋಪ ; 'ಬಸವ ಮಂಟಪ' ಕೃತಿ ಮು...
20-11-26 05:15 pm
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
24-11-26 09:44 pm
HK News Staffer
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
24-11-26 06:46 pm
HK News Staffer
ಕದ್ರಿ ಯುದ್ಧ ಸ್ಮಾರಕದ ಬಳಿಯ ಯುದ್ಧ ಟ್ಯಾಂಕ್ ಮೇಲೆ ಹ...
24-11-26 10:51 am
ವಾಕಿಂಗ್ ಮಾಡ್ತಿದ್ದವರಿಂದ ವಸೂಲಿ ಪ್ರಕರಣ, ಘಟ್ಟದ ಮೇ...
24-11-26 10:49 am
ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ ಜಾರಿಯಾಗದ ಹಿ...
24-11-26 09:45 am
ಮಂಗಳೂರು ಕಮಿಷನರೇಟ್ ; ರಾತ್ರಿ ವಹಿವಾಟು ನಿರ್ಬಂಧ ಸಡ...
23-11-26 09:25 pm
23-11-26 02:24 pm
HK News Staffer
ತಲೆ ಕಡಿದು ಧ್ವನಿ ಅಡಗಿಸಬಹುದು, ನ್ಯಾಯದ ಧ್ವನಿಯನ್ನಲ...
23-11-26 11:59 am
ಸತ್ತಿದ್ದಾಳೆ ಎಂದ ಮಹಿಳೆ 7 ವರ್ಷಗಳ ಬಳಿಕ ಪ್ರತ್ಯಕ್ಷ...
21-11-26 04:41 pm
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm