ಬ್ರೇಕಿಂಗ್ ನ್ಯೂಸ್
13-01-21 12:08 pm Bangalore Correspondent ಕರ್ನಾಟಕ
ಬೆಂಗಳೂರು, ಜ.13: ಸಿಎಂ ಯಡಿಯೂರಪ್ಪ ಹೊಸತಾಗಿ ಸಚಿವರಾಗುವ ಏಳು ಮಂದಿಯ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದೇ ವೇಳೆ, ಅಬಕಾರಿ ಸಚಿವರಾಗಿದ್ದ ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆಮೂಲಕ ಒಬ್ಬರನ್ನು ಕೈಬಿಟ್ಟು ಏಳು ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಏಳು ಮಂದಿ ಸಂಪುಟಕ್ಕೆ ಸೇರುವ ಪಟ್ಟಿಯಲ್ಲಿ ಕಳೆದ ಬಾರಿ ಸರಕಾರ ಬರುವ ಸಂದರ್ಭದಲ್ಲಿ ಯಡಿಯೂರಪ್ಪ ಬಲಗೈನಂತಿದ್ದುಕೊಂಡು ಕೆಲಸ ಮಾಡಿದ್ದ ಸಿ.ಪಿ.ಯೋಗೀಶ್ವರ್, ಬೆಳಗಾವಿ ಮೂಲದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಅರವಿಂದ ಲಿಂಬಾವಳಿ, ಸುಳ್ಯದಲ್ಲಿ ಸತತ ಆರು ಬಾರಿ ಗೆದ್ದಿರುವ ಎಸ್.ಅಂಗಾರ ಹಾಗೂ ಕಾಂಗ್ರೆಸ್ನಿಂದ ಬಿಜೆಪಿ ಸೇರ್ಪಡೆಯಾಗಿದ್ದ ಎಂಟಿಬಿ ನಾಗರಾಜ್ ಮತ್ತು ಆರ್.ಶಂಕರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಆದರೆ, ಬೆಂಗಳೂರಿನ ಆರ್.ಆರ್ ನಗರ ಕ್ಷೇತ್ರದ ಶಾಸಕ, ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಂದಿದ್ದ ಮುನಿರತ್ನ ಹೆಸರು ಕೊನೆಕ್ಷಣದಲ್ಲಿ ಪಟ್ಟಿಯಿಂದ ಹೊರಬಿದ್ದಿದೆ.
ನಿನ್ನೆ ವರೆಗೂ ಮುನಿರತ್ನ ಅವರಿಗೆ ಕ್ಯಾಬಿನೆಟ್ ಸೇರಲಿದ್ದಾರೆ ಎನ್ನಲಾಗಿತ್ತು. ಮುನಿರತ್ನರನ್ನು ಸೇರಿಸಿಕೊಳ್ಳಲು ಯಡಿಯೂರಪ್ಪ ಕೂಡ ಒಲವು ಹೊಂದಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಮುನಿರತ್ನ ಅವರನ್ನು ಸಚಿವರನ್ನಾಗಿಸಲು ಒಪ್ಪಿಗೆ ನೀಡಿಲ್ಲ ಎನ್ನಲಾಗುತ್ತಿದೆ. ಹೈಕಮಾಂಡ್ ಒಪ್ಪಿಗೆಯ ಮೇರೆಗೆ ಸಿಎಂ ಯಡಿಯೂರಪ್ಪ ಏಳು ಮಂದಿಯ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಸೇರಿ ಎಂಟು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ತಯಾರಿ ನಡೆಸಿದ್ದರು. ಅದಕ್ಕಾಗಿಯೇ ಒಬ್ಬರು ಸಚಿವರನ್ನು ಕೈಬಿಡಲು ತಯಾರಿ ನಡೆಸಿದ್ದರು. ಸಿಎಂ ಸೂಚನೆಯಂತೇ ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹಾಗಿದ್ದರೂ, ಮುನಿರತ್ನ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೇ ಸಂಪುಟ ವಿಸ್ತರಣೆಗೆ ಸಿಎಂ ಮತ್ತು ಬಿಜೆಪಿ ಹೈಕಮಾಂಡ್ ಕೈಹಾಕಿದೆ.
ವಿಶೇಷ ಅಂದ್ರೆ, ಈಗ ಸಂಪುಟ ಸೇರುತ್ತಿರುವವರಲ್ಲಿ ಎಲ್ಲರೂ ಯಡಿಯೂರಪ್ಪ ಪರ ಇರುವ ಬಣದವರೇ. ಅಂಗಾರ ಎಸ್ಸಿ ಕೋಟಾದಲ್ಲಿ ಸಂಪುಟ ಸೇರಿದರೆ, ಲಿಂಬಾವಳಿ, ನಿರಾಣಿ, ಉಮೇಶ ಕತ್ತಿ ಈ ಹಿಂದೆಯೂ ಯಡಿಯೂರಪ್ಪ ಜೊತೆಗೆ ಸಚಿವರಾಗಿ ಕೆಲಸ ಮಾಡಿದವರು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ, ಸುನಿಲ್ ಕುಮಾರ್ ಗೆ ಸ್ಥಾನ ಲಭಿಸಿಲ್ಲ. ಈ ಬಗ್ಗೆ ಸುನಿಲ್ ಕುಮಾರ್ ಅಸಮಾಧಾನದಿಂದ ಟ್ವೀಟ್ ಮಾಡಿದ್ದಾರೆ. ಪಕ್ಷ ನಿಷ್ಠೆ , ಹಿಂದುತ್ವ ನನ್ನ ಅಜೆಂಡಾ. ತಾನೇನು ಜಾತಿ ರಾಜಕಾರಣ ಮಾಡಿಲ್ಲ. ಜಾತಿ ನೆಲೆಯಲ್ಲಿ ಲಾಬಿಯನ್ನೂ ಮಾಡಿಲ್ಲ. ಪಕ್ಷದ ಶಿಸ್ತಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಸಚಿವ ಸ್ಥಾನದ ವಿಚಾರ ಪ್ರಸ್ತಾಪಿಸದೆ ಟ್ವೀಟ್ ಮಾಡಿದ್ದಾರೆ.
Karnataka Cabinet Expansion 2021 CM Yediyurappa Announce Names Of New Cabinet Ministers list.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm