ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ಆಗಸ್ಟ್ 15ರವರೆಗೂ ನಿಷೇಧಾಜ್ಞೆ

13-08-20 06:45 am       Headline Karnataka News Network   ಕರ್ನಾಟಕ

ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಹಿನ್ನೆಲೆ ಎರಡೂ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಹಿನ್ನೆಲೆ ಎರಡೂ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್.15ರ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಸುವ ಬಗ್ಗೆ ನಗರ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ತನಿಖೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್ ನೇತೃತ್ವದ ತಂಡ ನಡೆಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.