ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆ

17-01-21 02:54 pm       Bangalore Correspondent   ಕರ್ನಾಟಕ

ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು, ಜನವರಿ 17: ಕರ್ನಾಟಕದ ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹಾಗೆಯೇ ಮತ್ತೊಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಶನಿವಾರದಿಂದಲೂ ಮೋಡಕವಿದ ವಾತಾವರಣವಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶನಿವಾರ ಶಿವಮೊಗ್ಗದ ಕೆಲವೆಡೆ ತುಂತುರು ಮಳೆಯಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರೆಯಲಿದೆ.

ಬಂಗಾಳಕೊಲ್ಲಿಯಿಂದ ಬರುತ್ತಿರುವ ನೈಋತ್ಯ ಮಳೆ ಮಾರುತಗಳು ವ್ಯಾಪಕ ಮಳೆಗೆ ಕಾರಣವಾಗಿದ್ದವು. ಪುದುಚ್ಚೇರಿ, ಕಾರೈಕಲ್, ಮಾಹೆ ಹಾಗೂ ಲಕ್ಷದೀಪಗಳಲ್ಲಿ ಮಳೆಯಾಗಿದೆ.

ಈ ಬಾರಿ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಚಳಿ ಅಷ್ಟಾಗಿ ಕಾಣಿಸಿಕೊಂಡಿಲ್ಲ,ಸಂಕ್ರಾಂತಿ ಕಳೆದ ಮೇಲೆ ಸಾಮಾನ್ಯವಾಗಿ ಸೆಕೆಗಾಲ ಆರಂಭವಾಗುತ್ತದೆ.

Heavy Rains are said to be expected across Dakshina Kannada and Udupi states Weather Forecast.