ಬ್ರೇಕಿಂಗ್ ನ್ಯೂಸ್
18-01-21 11:57 am Headline Karnataka News Network ಕರ್ನಾಟಕ
ಬೆಂಗಳೂರು, ಜ.18 : ಗಡಿ ವಿವಾದದ ಬಗ್ಗೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಎಸ್ ವೈ, “ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಹೊಂದಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತನಾಡಿರುವುದು ಅವರ ಉದ್ಧಟತನಕ್ಕೆ ಸಾಕ್ಷಿ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ’’

“ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ” ಎಂದು ಯಡಿಯೂರಪ್ಪ ಹೇಳಿದ್ದಾರೆ.
“ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದರು. ಅವರ ಈ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ , ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಚಾಟಿ ಬೀಸಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm