ಬ್ರೇಕಿಂಗ್ ನ್ಯೂಸ್
26-01-21 10:45 am Headline Karnataka News Network ಕರ್ನಾಟಕ
ಬಳ್ಳಾರಿ, ಜ.26: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ , ಮೂಲತಃ ಮಂಗಳಮುಖಿಯಾಗಿರುವ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಹುಟ್ಟಿದ ಜೋಗತಿ ಮಂಜಮ್ಮ ಪ್ರಸ್ತುತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ವಾಸವಿದ್ದಾರೆ. ತಮ್ಮ 18ನೇ ವಯಸ್ಸಿನಿಂದ ಕಲಾಸೇವೆ ಆರಂಭಿಸಿ, ಜೋಗತಿ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈವರೆಗೂ ಸಾವಿರಾರು ಪ್ರದರ್ಶನಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅವರು ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗುವ ವೇಳೆಗಾಗಲೇ ಸ್ವೀಕರಿಸಿದ್ದ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡವರು.

ಸಂಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮಂಗಳಮುಖಿ ಜೋಗತಿ ಮಂಜಮ್ಮ ಅವರು ಕಲಾ ಕ್ಷೇತ್ರದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ತೃತೀಯ ಲಿಂಗಿ ಸಮುದಾಯದಲ್ಲಿ ಮಂಜಮ್ಮ ಜೋಗತಿ ಅವರು ಮೊದಲ ಬಾರಿಗೆ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಜಮ್ಮ ಅವರ ಸಾಧನೆಗೆ ಹಲವಾರು ಪ್ರಶಸ್ತಿ , ಗೌರವಗಳು ಅರಸಿ ಬಂದಿವೆ. 2006ರಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ , 2007ರಲ್ಲಿ ಜಾನಪದ ಶ್ರೀ ಪ್ರಶಸ್ತಿ , 2008ರಲ್ಲಿ ಜಾನಪದ ಲೋಕ ಪ್ರಶಸ್ತಿ , 2010 ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ,2012 ರಲ್ಲಿ ಶ್ರೀ ತಾಯಮ್ಮ ಮಲ್ಲಯ್ಯ ದತ್ತಿನಿಧಿ ಪ್ರಶಸ್ತಿ ,2014 ರಲ್ಲಿ ಸಮಾಜ ಸಖಿ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ದೇಶದ ಪ್ರತಿಷ್ಠಿತ ಮತ್ತು ಜೀವಮಾನದಲ್ಲಿ ಅತ್ಯುನ್ನತ ಸಾಧನೆಗಾಗಿ ನೀಡಲಾಗುವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
FIve distinguished personalities from Karnataka have been conferred with the Padma awards in 2021 among which Transgender Matha B Manjamma Jogati from Bellary is also one among them.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm