ಬ್ರೇಕಿಂಗ್ ನ್ಯೂಸ್
23-02-21 01:51 pm Headline Karnataka News Network ಕರ್ನಾಟಕ
ನವದೆಹಲಿ, ಫೆ.23 : ಸರಕಾರದಿಂದ ಅನುಮತಿ ಪಡೆದಿರುವ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಮಾತ್ರ ಸ್ಫೋಟಕ ಸಾಮಗ್ರಿಗಳನ್ನು ಬಳಕೆ ಮಾಡುವಂತಾಗಲು ಹೊಸ ಕಾನೂನು ಜಾರಿ ಮಾಡಲಾಗವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸಚಿವರು ನವದೆಹಲಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಘಟನೆಯ ಬಗ್ಗೆ ಮಾಧ್ಯದವರು ಪ್ರಶ್ನೆ ಮಾಡಿದಾಗ, ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದ ಇಂಥ ಅವಘಡಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ಸಾಮಗ್ರಿ ಬಳಸುವ ಕಾನೂನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ರೀತಿಯ ಅವಘಡಗಳು ಗಣಿ ಕಾರ್ಮಿಕರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಜಿಲೆಟಿನ್ ಕಡ್ಡಿ ಸಹಿತ ಸ್ಫೋಟಕಗಳು ಮತ್ತು ಇತರ ಸೋಟಕ ಸಾಮಗ್ರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಹಿರೇನಾಗವಲ್ಲಿ ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಸ್ಫೋಟ ಪ್ರಕರಣ ; ಮುಖ್ಯಮಂತ್ರಿ ದುರಾಡಳಿತಕ್ಕೆ ಅಮಾಯಕರು ಬಲಿ : ಸಿದ್ದರಾಮಯ್ಯ ಆಕ್ರೋಶ
6 Dead In Quarry Blast In Karnataka's Chikkaballapur Minister of Mines and Geology Murugesh Nirani brings new law.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm