ಒಬ್ಬರಿಗೆ ಒಂದೇ ಹುದ್ದೆ ; ಪಕ್ಷದ ಹುದ್ದೆ ತ್ಯಜಿಸಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ 

23-02-21 07:28 pm       Headline Karnataka News Network   ಕರ್ನಾಟಕ

ಕನ್ನಡ ಮತ್ತು ಸಂಸ್ಕೃತಿ ಹಾಗು ಅರಣ್ಯ ಸಚಿವನಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಅರವಿಂದ ಲಿಂಬಾವಳಿ ಇದೀಗ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು, ಫೆ. 23: ಕನ್ನಡ ಮತ್ತು ಸಂಸ್ಕೃತಿ ಹಾಗು ಅರಣ್ಯ ಸಚಿವನಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಅರವಿಂದ ಲಿಂಬಾವಳಿ ಇದೀಗ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾಗಿ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎನ್ನುವ ಸಿದ್ಧಾಂತವಿದೆ. ಈಗ ಸಚಿವನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಹೀಗಾಗಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮದಂತೆ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಲಿಂಬಾವಳಿ ತಿಳಿಸಿದ್ದಾರೆ. 

ಪಕ್ಷ ಸಂಘಟನೆಗೆ ಅವಕಾಶ ಮಾಡಿ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು. ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿದ್ದ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ಎಂದು ರಾಜೀನಾಮೆ ಪತ್ರದಲ್ಲಿ ಲಿಂಬಾವಳಿ ಹೇಳಿದ್ದಾರೆ.

In a major development minister of Kannada and Culture Arvind Limbavali resigned from his post as Vice President of Karnataka State of BJP.