79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

27-02-21 11:48 am       Headline Karnataka News Network   ಕರ್ನಾಟಕ

ಸಿಎಂ ಬಿಎಸ್​ವೈ ಇಂದು ತಮ್ಮ 79ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು,ಸಚಿವರು, ಶಾಸಕರು ಸೇರಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ. 

ಬೆಂಗಳೂರು,  ಫೆ.27 : ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ 79ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸಿಎಂ ಬಿಎಸ್​ವೈಗೆ ಸಚಿವರು, ಶಾಸಕರು ಸೇರಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ. 

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದ್ದು, ಸಿಎಂ ನಿವಾಸ ಕಾವೇರಿ ಸುತ್ತ ಬಿಗಿ ಪೊಲೀಸ್​ ಬಂದೋಬಸ್ತ್ ಆಯೋಜಿಸಲಾಗಿದೆ. ಹುಟ್ಟುಹಬ್ಬದ ಸಂಭ್ರಮಲ್ಲಿರುವ ಬಿಎಸ್​ವೈ, ಸಂಜಯ ನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ..

ಮುಖ್ಯಮಂತ್ರಿ ಯಡಿಯೂರಪ್ಪನವರ 79ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ. B.S.ಯಡಿಯೂರಪ್ಪ ನಮ್ಮ ಹಿರಿಯ ಅನುಭವಿ ನಾಯಕ, ಸಿಎಂ B.S.ಯಡಿಯೂರಪ್ಪ ತಮ್ಮ ಜೀವನವನ್ನು ರೈತರು, ಬಡವರ ಅಭಿವೃದ್ಧಿಗಾಗಿ ಮುಡಿಪಾಗಿಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ದೇವರು ಆರೋಗ್ಯ ಆಯಸ್ಸು ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಜೀವನದಲ್ಲಿ ನಡೆದುಬಂದ ಹಾದಿ..

  • 1972ರಲ್ಲಿ ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಬಿಎಸ್‌ವೈ ನೇಮಕಗೊಂಡರು.
  • 1975ರಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ 45 ದಿನಗಳ ಜೈಲುವಾಸ.
  • 1977ರಲ್ಲಿ ಶಿಕಾರಿಪುರ ಪುರಸಭಾ ಅಧ್ಯಕ್ಷರಾಗಿ ಆಯ್ಕೆ.
  • 1980ರಲ್ಲಿ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆ.
  • 1981ರಲ್ಲಿ ಜೀತಾದಾಳು ವಿಮುಕ್ತಿ ಹೋರಾಟದ ನಾಯಕತ್ವ ಪಾದಯಾತ್ರೆ.
  • 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ವಿಧಾನ ಸಭೆಗೆ ಪ್ರವೇಶ.
  • 1985ರಲ್ಲಿ ಬಿಜೆಪಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ.
  • 1988ರಲ್ಲಿ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ.
  • 1988ರಲ್ಲಿ ಬಸವ ಕಲ್ಯಾಣದಿಂದ ಬೆಂಗಳೂರು ವರೆಗೆ ರೈತ ಜಾಥಾ ಹಾಗೂ ಬನವಾಸಿಯಿಂದ ಬೆಂಗಳೂರು ವರೆಗೆ ರೈತ ಜಾಥಾದ ನೇತೃತ್ವ.
  • 1991ರಲ್ಲಿ ಡಾ. ಮುರಳೀ ಮನೋಹರ ಜೋಶಿ ನೇತೃತ್ವದಲ್ಲಿ ನಡೆದ ಏಕತಾ ಯಾತ್ರೆಯಲ್ಲಿ ಭಾಗಿ. ಶ್ರೀನಗರದ ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜಾರೋಹಣ.
  • 1992ರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನಿಯೋಜನೆ.
  • 1994ರಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆ.
  • 1998 ತಲಕಾವೇರಿಯಿಂದ ಕೆ.ಆರ್.ಎಸ್ ವರೆಗೆ ರೈತ ಜಾಥಾ. 2000ರಲ್ಲಿ ವಿಧಾನ ಪರಿಷತ್​ಗೆ ಆಯ್ಕೆ.
  • 2003 ಬಗರ್ ಹುಕುಂ ರೈತರ ಜಮೀನು ಸಕ್ರಮಕ್ಕೆ ಆಗ್ರಹಿಸಿ ಶಿಕಾರಿಪುರದಿಂದ ಬೆಂಗಳೂರಿಗೆ ಪಾದಯಾತ್ರೆ.
  • 2004ರಲ್ಲಿ 5ನೇ ಬಾರಿ ವಿಧಾನಸಭೆಗೆ ಪ್ರವೇಶ, ಪ್ರತಿಪಕ್ಷದ ನಾಯಕನಾಗಿ ಆಯ್ಕೆ.
  • 2006 ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆ ನಿರ್ವಹಣೆ.
  • 2007ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ, ಜೆಡಿಎಸ್ ನಿಂದ ಅಧಿಕಾರ ನಿರಾಕರಣೆ.
  • 2008 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ.
  • 2011 ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ. 2014 ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆ ಪ್ರವೇಶ.
  • 2014ರಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ.
  • 2016ರಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನೇಮಕ.
  • 2017 ನವಂಬರ್ 2ರಿಂದ 2018ರ ಜನವರಿ 28ರ ವರೆಗೆ “ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ”. ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಪಕ ಪ್ರವಾಸ.
  • 2018ರಲ್ಲಿ ಮೇ 13ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ.
  • 2018ರಲ್ಲಿ ಮೇ 25ರಿಂದ 2019ರ ಜುಲೈ 25ರವರೆಗೆ ವಿಧಾನಸಭೆ ವಿಪಕ್ಷ ನಾಯಕರಾಗಿದ್ದರು.
  • 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 104 ಸ್ಥಾನಗಳನ್ನು ಗೆಲ್ಲುವಂತೆ ಮುನ್ನೆಡೆಸಿದ ಬಿಎಸ್‌ವೈ, ಸಿಎಂ ಆಗಿ ಬಹುಮತ ಸಾಬೀತುಪಡಿಸುವುದಕ್ಕೂ ಮುಂಚೆಯೇ ರಾಜೀನಾಮೆ ನೀಡಿದ್ದರು. ಇದರಿಂದ ಮೂರೇ ದಿನಕ್ಕೆ ಅವರ ಸರಕಾರ ಪತನವಾಯಿತು.
  • 2019 ರ ಜೂಲೈ 26ರಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.

Prime Minister Narendra Modi on Saturday extended birthday greetings to Karnataka Chief Minister BS Yediyurappa, calling him one of the most experienced leaders who has devoted his life to farmers and the poor.