ಬ್ರೇಕಿಂಗ್ ನ್ಯೂಸ್
27-02-21 11:54 am Headline Karnataka News Network ಕರ್ನಾಟಕ
ಮೈಸೂರು, ಫೆ.27 : ಪಕ್ಷಕ್ಕಾಗಿ ದುಡಿಯುವವರು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸರಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುವುದಲ್ಲ. ನಮಗೆ ತೃಪ್ತಿ ಇರಬಹುದು. ಆದರೆ ಜನರಲ್ಲಿ ಅತೃಪ್ತಿ ಇದ್ದು, ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದ್ದು, ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಗೆ ಕೆಲವು ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm