ಬ್ರೇಕಿಂಗ್ ನ್ಯೂಸ್
04-03-21 12:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 4: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.

ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸುಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.
BJP Minister Ramesh Jarkiholi who has been caught in Caught in sex-for-job scandal is now planned to approach the court to stop his sex video from being played on News and Social Media Platforms.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm