ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್‌ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ನಡೆದಿದೆ.
ಸಂಚಾರಿ ಎಎಸ್‌ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್‌ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm