ಬ್ರೇಕಿಂಗ್ ನ್ಯೂಸ್
08-03-21 02:51 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಬಿಜೆಪಿ ಫೈರ್ ಬ್ರಾಂಡ್, ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ರಾಜಕೀಯದಿಂದ ದೂರ ಸರಿಯುವ ಮಾತು ಮತ್ತೆ ಮುನ್ನೆಲೆಗೆ ಬಂದಿದೆ. ಹಲವು ವರ್ಷಗಳಿಂದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದ ಹೆಗಡೆ, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಕೆಲವು ತಿಂಗಳ ಕಾಲ ಹೊರಗೆ ನಡೆಯಲಾಗದ ಸ್ಥಿತಿಗೆ ತಲುಪಿದ್ದಾರೆ.
ವೈದ್ಯರು ದೀರ್ಘಾವಧಿ ವಿಶ್ರಾಂತಿಗೆ ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಹೆಗಡೆಯವರು ಇನ್ನು ಒಂದು ವರ್ಷ ಕಾಲ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಕಷ್ಟಸಾಧ್ಯ ಎನ್ನುವ ಮಾತು ಕೇಳಿಬರುತ್ತಿದೆ.
ಕಳೆದ ಹಲವು ವರ್ಷಗಳ ಬೆನ್ನು ಮತ್ತು ಕಾಲು ನೋವಿನ ಕಾರಣದಿಂದ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ಸ್ವತಃ ಅನಂತಕುಮಾರ್ ಹೆಗಡೆ ಹೇಳಿಕೊಂಡಿದ್ದರು. ಇದೀಗ ಚಿಕಿತ್ಸೆಯ ಕಾರಣ ಸಾರ್ವಜನಿಕ ಜೀವನದಿಂದ ಹೊರಗುಳಿದಿರುವ ಹೆಗಡೆ ಶಾಶ್ವತವಾಗೇ ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಉತ್ತರ ಕನ್ನಡ ಕ್ಷೇತ್ರದಿಂದ 6 ಬಾರಿ ಸಂಸದರಾಗಿರುವ ಅನಂತಕುಮಾರ ಹೆಗಡೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೌಶಲ್ಯಾಭಿವೃದ್ದಿ ಸಚಿವರಾಗಿದ್ದರು. ಆದರೆ, ಸಚಿವರಾದ ವೇಳೆಯಲ್ಲಿಯೇ ಹಲವು ವಿವಾದಾತ್ಮಕ ಹೇಳಿಕೆ ಕೊಟ್ಟು, ವಿವಾದಕ್ಕೆ ಒಳಗಾಗಿದ್ದರು.
ಬಳಿಕ ಸಚಿವ ಸಂಪುಟ ವಿಸ್ತರಣೆ ವೇಳೆ ಅವರಿಗೆ ಅವಕಾಶ ಕೊಟ್ಟಿರಲಿಲ್ಲ. ಆದರೆ, ರಾಜ್ಯದ 'ಫೈರ್ ಬ್ರಾಂಡ್' ರಾಜಕಾರಣಿ ಎಂದೇ ಪ್ರಸಿದ್ಧಿಯಾಗಿರುವ ಹೆಗಡೆಗೆ ಮತ್ತೆ ಸಚಿವ ಸ್ಥಾನ ಕೊಡುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಚಿಂತನೆ ನಡೆಸಿರುವ ಆರ್‌ಎಸ್‌ಎಸ್, ಸಚಿವ ಸ್ಥಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಹಿಂದುತ್ವದ ವಿಚಾರದಲ್ಲಿ ಎಂದೂ ರಾಜಿ ಮಾಡಿಕೊಳ್ಳದ ಹೆಗಡೆ, ಕೇಂದ್ರ ಸಚಿವರಾದ ವೇಳೆಯಲ್ಲಿ ರಾಜ್ಯದಲ್ಲಿ ಸಾಕಷ್ಟು ಓಡಾಟ ನಡೆಸಿದ್ದರು. ವಿವಾದಾತ್ಮಕ ಹೇಳಿಕೆ ನೀಡಿದ್ದರೂ ವರ್ಚಸ್ಸು ವೃದ್ಧಿಸಿಕೊಂಡಿದ್ದರು. ಈಗ ದಿಢೀರ್ ಆಗಿ ಬೆಡ್ ರೆಸ್ಟ್ ಹೋಗಿರುವ ಹೆಗಡೆಯವರು ರಾಜಕೀಯದಿಂದಲೇ ದೂರ ಸರಿಯುತ್ತಾರಾ ಎಂಬ ಮಾತು ರಾಜಕೀಯ ವಲಯದಲ್ಲಿ ಚರ್ಚೆಯ ವಸ್ತು.
Uttar Karnataka MP Ananth Kumar hedge to be far from politics for one year. Due to health issue the doctors have advised him for a long term rest.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm