ಬ್ರೇಕಿಂಗ್ ನ್ಯೂಸ್
09-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.9: ಸಿಡಿ ಪ್ರಕರಣದಿಂದ ಬೆಚ್ಚಿಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದಿದ್ದಾರೆ. ಸಿಡಿ ಪೂರ್ತಿ. ನನಗೂ ಅದಕ್ಕೂ ಸಂಬಂಧ ಇಲ್ಲ. ನನ್ನ ಹೆಸರು ಕೆಡಿಸಲು ಷಡ್ಯಂತ್ರ ನಡೆದಿದೆ. ಹಾಗಂತ, ನಾನು ಇದನ್ನು ಇಲ್ಲಿಗೇ ಬಿಡಲ್ಲ. ಇದರ ಹಿಂದೆ ಇರೋ ದೊಡ್ಡ ನಾಯಕರನ್ನು ಬಯಲಿಗೆ ತರುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗು ವಂದನೆಗಳು. ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿಗೆ ನನ್ನ ವಂದನೆಗಳು. ನೂರಕ್ಕೆ ನೂರರಷ್ಟು ಈ CD ನಕಲಿ. ನಾನು ನಿರಪರಾಧಿ, ಎಂದು ಹೇಳಿದ್ದಾರೆ.

ಬೆಂಗಳೂರಿನ ಎರಡು ಕಡೆ ಷಡ್ಯಂತ್ರ ನಡೆದಿದೆ. ಸಿಡಿ ಬಿಡುಗಡೆಯಾದ ಒಂದು ದಿನ ರಾತ್ರಿ ಕಾದು ನಂತರ ರಾಜೀನಾಮೆ ನೀಡಿದೆ. ಏನೇನು ಆಗುತ್ತೆ ಎಂದು ತಿಳಿಯೋಣ ಎಂದು ಸುಮ್ಮನಿದ್ದೆ. ನಾನು ರಾಜೀನಾಮೆ ಕೊಟ್ಟು ನೇರವಾಗಿ ಊರಿಗೆ ಹೋಗಿದ್ದೆ. ನಂತರ ಏನು ಬೆಳವಣಿಗೆ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಒಬ್ಬ ಮಹಾನ್ ನಾಯಕನಿಂದ ಇದೆಲ್ಲಾ ಆಗಿದೆ. ಅವರ ಬಗ್ಗೆ ಈಗ ಹೇಳುವುದಕ್ಕೆ ಆಗುವುದಿಲ್ಲ. ಇದೊಂದು ಬಹಳ ಸೂಕ್ಷ್ಮ ವಿಚಾರವಾಗಿದೆ. ಇದನ್ನು ರಾಜಕೀಯ ಮಾಡುವುದಕ್ಕೆ ಹೋಗಬಾರದು. ಯಶವಂತಪುರ, ಹುಳಿಮಾವು ಸೇರಿ ಬೆಂಗಳೂರಿನ 2 ಕಡೆ ಷಡ್ಯಂತ್ರ ನಡೆದಿದೆ. ಯಶವಂತಪುರದ 4, 5ನೇ ಮಹಡಿಯಲ್ಲಿ ಷಡ್ಯಂತ್ರ ನಡೆದಿದೆ. ಅವರನ್ನು ಜೈಲಿಗೆ ಹಾಕದೆ ಸುಮ್ಮನೆ ಬಿಡುವುದಿಲ್ಲ. ನಾನು ಸುಮ್ಮನೆ ಇದರಲ್ಲಿ ರಾಜಕೀಯ ಮಾಡಲು ಹೋಗಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳನ್ನು ಹೇಳುತ್ತೇನೆ ಎಂದರು.

ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ನನಗೆ ಎಲ್ಲ ಪಕ್ಷದವರ ಮೇಲೆ ಗೌರವ ಇದೆ. ನನಗೆ ರಾಜಕಾರಣ ಬೇಕಿಲ್ಲ, ಕುಟುಂಬದ ಗೌರವ ಮುಖ್ಯ. ನಾವು ಈವರೆಗೆ ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಹೆಚ್.ಡಿ.ಕುಮಾರಸ್ವಾಮಿ ನನ್ನ ಪರವಾಗಿ ಮಾತನಾಡಿದ್ದಾರೆ. ಮೊದಲು ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಮಾತನಾಡಿದ್ದರು. ಸಿಡಿಯಲ್ಲಿದ್ದ ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ಇದರ ವಿರುದ್ಧ ನಾನೇಕೆ ದೂರು ನೀಡುವುದಕ್ಕೆ ಹೋಗಲಿ. ಆರೋಪವನ್ನು ನಾನು ಧೈರ್ಯವಾಗಿ ಎದುರಿಸುತ್ತೇನೆ. ನನ್ನ ವಿರೋಧಿಗಳಿಗೆ ಇದೊಂದು ದೊಡ್ಡ ಅಸ್ತ್ರವಾಗಿದೆ. ಇಂತಹವು 10 ದೂರು ಬಂದರೂ ನಾನು ಎದುರಿಸಲು ಸಿದ್ಧನಿದ್ದೇನೆ. ನನಗೆ ಖಾತೆ ಬೇಕೆಂದು ನಾನು ಕೇಳುವುದಕ್ಕೆ ಹೋಗಲ್ಲ. ನನಗೆ ನನ್ನ ಕುಟುಂಬದ ಗೌರವವೇ ಮುಖ್ಯ ಎಂದು ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಇದೇ ವೇಳೆ, ಸಿಡಿಯಲ್ಲಿರೋದು ನಾನಲ್ಲ ಎಂಬ ಮಾತನ್ನು ಪುನರುಚ್ಚರಿಸಿದ್ದಾರೆ.
Former BJP minister Ramesh Jarkiholi briefs media in Bangalore about his sex video release. He has claimed that he is innocent and the sex CD was a conspiracy against him.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm