ಬ್ರೇಕಿಂಗ್ ನ್ಯೂಸ್
19-08-20 09:22 pm Headline Karnataka News Network ಕರ್ನಾಟಕ
ಶಿವಮೊಗ್ಗ , ಆಗಸ್ಟ್ 19: ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಘು ಆಚಾರ್ ಬರೆದುಕೊಂಡಿರುವ ಪೋಸ್ಟಿನ ಯಥಾವತ್ ಕಾಪಿ ಹೀಗಿದೆ: "ಇಷ್ಟಕ್ಕೂ ಇಂತಹದೊಂದು ಬಹಿರಂಗ ಭಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ". "ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ".

ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದೀರಿ. ಆಶೀರ್ವಾದ ಮಾಡುತ್ತಿದ್ದೀರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.
ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ.

ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ. ಇಂತಿ ತಮ್ಮ ವಿಶ್ವಾಸಿ, ರಘು ಆಚಾರ್, ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm