ಬ್ರೇಕಿಂಗ್ ನ್ಯೂಸ್
10-03-21 11:27 am Bangalore Correspondent ಕರ್ನಾಟಕ
Photo credits : enJerusha Maben
ಬೆಂಗಳೂರು, ಮಾ.10: ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ಶಾಂತಕುಮಾರ್ ನೇಣಿಗೆ ಶರಣಾಗಿದ್ದಾರೆ. ಕಂಪನಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಆರ್ಥಿಕವಾಗಿ ಬಹುತೇಕ ಸಮಸ್ಯೆಗಳನ್ನು ಎದುರಿಸಿ ಕುಗ್ಗಿದ್ದರು. ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ವೇತನ ಹೆಚ್ಚಳ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಾರ್ಚ್ 09ರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಶಾಂತಕುಮಾರ್ ಸಹದ್ಯೋಗಿಗಳ ಬಳಿ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ.
Techie commits suicide inside the company for not increasing his salary in Bangalore.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm