ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

11-03-21 04:30 pm       Bangalore Correspondent   ಕರ್ನಾಟಕ

ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮಾರ್ಚ್ 11: ಕರ್ನಾಟಕದ ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ 24 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ದೆಹಲಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಕೇರಳದಲ್ಲಿ ಮಳೆಯಾಗುತ್ತಿದೆ. ಉತ್ತರಾಖಂಡ್ ಹಾಗೂ ಹಿಮಾಚಲದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಒಣಹವೆ ಮುಂದುವರೆಯಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಾತ್ರ ಮಳೆಯಾಗಲಿದೆ.

Heavy rains are expected in coastal Karnataka and other six districts of Karnataka says the weather forecast department