ಬ್ರೇಕಿಂಗ್ ನ್ಯೂಸ್
13-03-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.13: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಹಾಲ್ ಅಥವಾ ಯಾವುದೇ ರೀತಿಯ ಒಳಾಂಗಣಗಳಲ್ಲಿ ನಡೆಯುವ ಮದುವೆ ಇನ್ನಿತರ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ತೆರೆದ ಮೈದಾನಗಳಲ್ಲಿ ಮದುವೆ ನಡೆಯುವುದಿದ್ದರೆ 500 ಜನ ಸೇರಲು ಅವಕಾಶ ನೀಡಲಾಗಿದೆ. ಹುಟ್ಟುಹಬ್ಬ, ಶವ ಸಂಸ್ಕಾರ, ಅಂತ್ಯಕ್ರಿಯೆ ಅಥವಾ ಸಣ್ಣಮಟ್ಟಿನ ಕಾರ್ಯಕ್ರಮಗಳಿಗೆ ಒಳಾಂಗಣದಲ್ಲಿ ಕೇವಲ 50 ಜನ ಮಾತ್ರ ಸೇರಲು ಅವಕಾಶ ಇದ್ದರೆ, ಹೊರಭಾಗದಲ್ಲಿ ಕಾರ್ಯಕ್ರಮ ನಡೆಯುವುದಿದ್ದರೆ 100 ಜನ ಸೇರಲು ಅವಕಾಶ ನೀಡುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.
ತೆರೆದ ಪ್ರದೇಶಗಳಲ್ಲಿ ನಡೆಯುವ ಯಾವುದೇ ರೀತಿಯ ಧಾರ್ಮಿಕ ಆಚರಣೆಗಳು ಅಥವಾ ರಾಜಕೀಯ ಸಭೆಗಳಿಗೆ 500 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಎಲ್ಲ ರೀತಿಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತ ಸರಕಾರದ ಮಾರ್ಗಸೂಚಿಯಂತೆ, 3.25 ಚದರ ಮೀಟರ್ ಸಾಮಾಜಿಕ ಅಂತರ ಕಾಪಾಡಬೇಕು ಎಂದು ರಾಜ್ಯದ ಆರೋಗ್ಯ ಇಲಾಖೆಯಿಂದ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಪ್ರಕರಣ ಹೆಚ್ಚುತ್ತಿರುವುದನ್ನು ತಡೆಗಟ್ಟುವ ಸಲುವಾಗಿ ಮತ್ತು ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಪೀಡಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವಂತೆ ಸ್ಥಳೀಯಾಡಳಿತಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸೂಚನೆ ನೀಡಲಾಗಿದೆ.
ಇದೇ ವೇಳೆ, ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ರಾತ್ರಿ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ರೆಸ್ಟೋರೆಂಟ್, ಹಾಲ್, ಹೊಟೇಲ್ ಗಳಲ್ಲಿ ನಡೆಯುವ ರಾತ್ರಿ ಪಾರ್ಟಿಗಳಿಗೆ ಸಂಪೂರ್ಣ ಕಡಿವಾಣ ಹಾಕಿ, ರಾಜ್ಯ ಸರಕಾರ ಆದೇಶ ಮಾಡಿದೆ.
ರಾಜ್ಯದಲ್ಲಿ ಗುರುವಾರ ಒಂದೇ ದಿನ 833 ಹೊಸ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ 526 ಹೊಸ ಪ್ರಕರಣ ಬೆಂಗಳೂರು ಒಂದರಲ್ಲೇ ವರದಿಯಾಗಿದ್ದು ಒಟ್ಟು 8114 ಕೋವಿಡ್ ಪಾಸಿಟಿವ್ ಸೋಂಕಿತರು ರಾಜ್ಯದಲ್ಲಿರುವುದನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿದೆ. ಹೀಗಾಗಿ ಮತ್ತೆ ಕೊರೊನಾ ಅಲೆ ಹೆಚ್ಚುತ್ತಿರುವುದನ್ನು ಗಮನಿಸಿ, ರಾಜ್ಯದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿಯಂತ್ರಣ ಹೇರಲಾಗಿದೆ.
The Karnataka State government has now issued a new rule for gatherings at a wedding, birthday parties and market fairs in Karnataka. Check details
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm