ಬ್ರೇಕಿಂಗ್ ನ್ಯೂಸ್
15-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಇಂದಿನಿಂದ ಎರಡು ದಿನ ಸಾರ್ವಜನಿಕರಿಗೆ ತಟ್ಟಲಿದೆ ಬ್ಯಾಂಕ್ ಬಂದ್ ಬಿಸಿ. ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ರಾಷ್ಟ್ರೀಕೃತ ಬ್ಯಾಂಕ್‌ಗಳ ನೌಕರರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿಂದು ಧರಣಿ ನಡೆಸಲಿದ್ದು ಸಾವಿರಾರು ಬ್ಯಾಂಕ್ ನೌಕರರು ಭಾಗಿಯಾಗಲಿದ್ದಾರೆ. ಬ್ಯಾಂಕ್ ಸಿಬ್ಬಂದಿ ಮುಷ್ಕರದಿಂದ ಗ್ರಾಹಕರಿಗೆ ಸಮಸ್ಯೆಯಾಗುವ ಸಾಧ್ಯತೆಗಳಿವೆ.
ಕೇಂದ್ರ ಸರ್ಕಾರ ಈ ಬಾರಿ ಬಜೆಟ್ನಲ್ಲಿ 2ಬ್ಯಾಂಕ್ ಖಾಸಗೀಕರಣ ಮಾಡೋದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಯತ್ನಿಸುತ್ತಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರೋದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್ಗಳು ಅಕ್ರಮ ಎಸಗಿವೆ. ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ ಕರೆಕೊಟ್ಟಿದೆ.
ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್‌ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
The United Forum of Bank Union (UFBU), an umbrella body of nine bank unions, has called for a two-day nationwide strike on March 15 and 16 against the privatisation of Public Sector Banks and retrograde banking reforms. Over 10 lakh bank employees and officers will participate in the strike.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm