ಬ್ರೇಕಿಂಗ್ ನ್ಯೂಸ್
15-03-21 08:01 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಸುಳಿವು ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ , ಬೀದರ್, ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಕೋವಿಡ್ ಸೋಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ 3500 ವ್ಯಾಕ್ಸಿನೇಶನ್ ಸೆಂಟರ್ ಇದೆ. ಪ್ರತಿ ದಿನ 3500 ಮಂದಿ ಲಸಿಕೆ ಪಡೆದರೆ ದಿನದಲ್ಲಿ 3.50 ಲಕ್ಷ ಜನರು ಲಸಿಕೆ ಪಡೆಯಬಹುದು. ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಪಾಸಿಟಿವ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆಯನ್ನು ಹೆಚ್ಚಿಸಲಾಗುವುದು. ಅಪಾರ್ಟ್ಮೆಂಟ್ ಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ಮತದಾರರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರಿಗೆ ಲಸಿಕೆ ನೀಡಲು ತಜ್ಞರು ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮದುವೆ, ರಾಜಕೀಯ ಸಭೆ ಇನ್ನಿತರ ಯಾವುದೇ ರೀತಿಯ ಸಭೆ, ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಮಯ ಕಡ್ಡಾಯ ಪಾಲಿಸುವಂತೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡುತ್ತೇನೆ. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಮಂದಿಯ ಮೇಲೆ ನಿಗಾ ಇಡಲಾಗುವುದು. ಸಾರಿಗೆ ಬಸ್ ಗಳಲ್ಲಿ ನಿಗದಿತ ಸಂಖ್ಯೆಯ ಪ್ರಯಾಣಿಕರಷ್ಟೇ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮತ್ತೆ ಲಾಕ್ಡೌನ್, ಕರ್ಫ್ಯೂ, ಬಂದ್ ಬೇಡ ಎಂದಿದ್ದರೆ, ಜನರೇ ಸ್ವಯಂಪ್ರೇರಿತವಾಗಿ ಮುಂಜಾಗ್ರತೆ ವಹಿಸಬೇಕು. ಲಾಕ್ಡೌನ್ ಪರಿಸ್ಥಿತಿ ಆಗದಂತೆ ಜನರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Covid rise in Karnataka , the CM has given a veiled warning to the citizens that unless people themselves start taking precautions the government may consider further stringent action.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm