ಬ್ರೇಕಿಂಗ್ ನ್ಯೂಸ್
15-03-21 09:28 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕನಿಷ್ಠ 25 ಸಾವಿರ ವೇತನ ನಿಗದಿ ಮತ್ತು ಸೇವಾ ಭದ್ರತೆ ನೀಡಬೇಕೆಂಬ ಸರಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಬಳಿಕ ಮಾನವೀಯತೆ ಆಧಾರದಲ್ಲಿ ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ವಿಷಯದ ಬಗ್ಗೆ ಮಾನವೀಯ ನೆಲೆಯಲ್ಲಿ ಪರಿಗಣಿಸುವ ಬಗ್ಗೆ ಸಭಾಪತಿ ಮತ್ತು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವ ಸದಸ್ಯರು ಮನವಿ ಮಾಡಿದ್ದಾರೆ. ಹತ್ತು ವರ್ಷ ಸೇವಾವಧಿ ಪೂರ್ಣಗೊಳಿಸಿರುವ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಬೇಕು. ಪ್ರತಿವರ್ಷ ಮರು ನೇಮಕ ಮಾಡಿಕೊಳ್ಳುವ ಅಗತ್ಯವಿಲ್ಲ.
ಮಾಸಿಕ ರೂ. 25 ಸಾವಿರ ವೇತನ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ ಎಂದು ಅಶ್ವತ್ಥ ನಾರಾಯಣ ಹೇಳಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಅರುಣ ಶಹಾಪೂರ, ಎಸ್.ಎಲ್. ಭೋಜೇಗೌಡ, ಎಸ್.ವಿ. ಸಂಕನೂರ ಉಪಸ್ಥಿತರಿದ್ದರು.
DCM Ashwath Narayan assured will decide on the guest lectures minimum scale issue.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm