ಬ್ರೇಕಿಂಗ್ ನ್ಯೂಸ್
16-03-21 11:27 am Bangalore Correspondent ಕರ್ನಾಟಕ
ಬೆಂಗಳೂರು, ಮಾ.15:ಕೆಲವು ವೈದ್ಯಕೀಯ ಕಾಲೇಜುಗಳು ಸೀಟುಗಳನ್ನು ಬ್ಲಾಕ್ ಮಾಡುವ ದಂಧೆಯಲ್ಲಿ ತೊಡಗಿರುವುದು ದೃಢಪಟ್ಟಿದೆ. ಈ ಬಗ್ಗೆ ಸರಕಾರ ರಚಿಸಿದ್ದ ತಂಡದ ಅಧ್ಯಯನದಲ್ಲಿ ಖಚಿತವಾಗಿದ್ದು, ವರದಿ ಪ್ರಕಾರ ತಪ್ಪಿತಸ್ಥ ಕಾಲೇಜುಗಳನ್ನು ಕಪ್ಪು ಪಟ್ಟಿಗೆ ಸೇರಿಸುವ ಚಿಂತನೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸದಸ್ಯ ಎನ್. ರವಿಕುಮಾರ್ ಈ ಬಗ್ಗೆ ಪ್ರಶ್ನೆ ಕೇಳಿದ್ದು, ಸೀಟು ಬ್ಲಾಕಿಂಗ್ ದಂಧೆ ತಡೆಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಬಹಳ ವರ್ಷಗಳಿಂದ ಈ ರೀತಿಯ ಸೀಟು ಬ್ಲಾಕಿಂಗ್ ದಂಧೆ ನಡೆದುಕೊಂಡು ಬಂದಿದೆ. ಕಾನೂನಿನ ಲೋಪಗಳನ್ನು ಬಳಸಿಕೊಂಡು ಕೆಲವು ಕಾಲೇಜುಗಳು ಸೀಟು ದಂಧೆ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿವೆ. ಇದರ ಬಗ್ಗೆ ಅಧ್ಯಯನ ನಡೆಸಲು ಸರಕಾರ ಸಮಿತಿ ರಚಿಸಿತ್ತು. ಇನ್ನು ಮುಂದೆ ದಂಡದ ಮೊತ್ತವನ್ನು ಹೆಚ್ಚಿಸುತ್ತೇವೆ. ಸೀಟು ಸರೆಂಡರ್ ಮಾಡಲು 25 ಲಕ್ಷ ದಂಡ ವಿಧಿಸುತ್ತೇವೆ. ಇದರಿಂದ ಸೀಟು ಬ್ಲಾಕಿಂಗ್ ದಂಧೆಗೆ ಕಡಿವಾಣ ಬೀಳಬಹುದು ಎಂದು ಹೇಳಿದರು.
ಈಗಾಗಲೇ ಸೀಟ್ ಬ್ಲಾಕಿಂಗ್ ಬಗ್ಗೆ ಕೇಂದ್ರೀಯ ತನಿಖಾ ತಂಡಗಳು ದಾಳಿ ನಡೆಸಿದ್ದು, ಅಪಾರ ಸಂಪತ್ತನ್ನು ವಶಕ್ಕೆ ಪಡೆದಿದೆ. ಕಪ್ಪು ಹಣಕ್ಕೆ ನಾವು ಕ್ರಮ ಕೈಗೊಳ್ಳಲು ಬರುವುದಿಲ್ಲ. ನಮ್ಮ ವಶದಲ್ಲಿರುವ ವೈದ್ಯಕೀಯ ಕಾಲೇಜು ತಪ್ಪು ಮಾಡಿದ್ರೆ, ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥ ಎಂದು ದೃಢಪಟ್ಟ ಕಾಲೇಜುಗಳನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸುತ್ತೇವೆ ಎಂದು ಹೇಳಿದರು.
ಇತ್ತೀಚೆಗಷ್ಟೇ ರಾಜ್ಯದ ಹತ್ತಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಅದರ ಮಾಲೀಕರ ಮನೆ, ಕಚೇರಿಗಳಿಗೆ ಐಟಿ ದಾಳಿ ನಡೆಸಿತ್ತು. ಸೀಟು ಬ್ಲಾಕಿಂಗ್ ದಂಧೆ ಮತ್ತು ಅದರಿಂದ ಭಾರೀ ಪ್ರಮಾಣದ ಸಂಪತ್ತು ಗಳಿಸಿದ್ದನ್ನು ಪತ್ತೆ ಮಾಡಿತ್ತು. ಇದೀಗ ಸೀಟು ಬ್ಲಾಕಿಂಗ್ ದಂಧೆ ನಡೆಸುವ ಕಾಲೇಜುಗಳನ್ನು ಕಪ್ಪು ಪಟ್ಟಿಗೆ ಸೇರಿಸುವುದಾಗಿ ಸರಕಾರ ಹೇಳಿದೆ.
Karnataka will put in place a clear policy by next year to prevent the sale of medical seats by private colleges, assured Health and Medical Education Minister K. Sudhakar on Monday in the Legislative Council.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm