ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್‌ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್‌ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm