ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm