ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
11-12-25 08:03 pm
HK News Desk
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 04:21 pm
Mangalore Correspondent
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am