ಬ್ರೇಕಿಂಗ್ ನ್ಯೂಸ್
17-03-21 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17; ಶಬ್ದಮಾಲಿನ್ಯ ತಡೆಯುವ ನಿಟ್ಟಿನಲ್ಲಿ ರಾಜ್ಯದ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ವಕ್ಫ್ ಬೋರ್ಡಿನಡಿ ನೋಂದಣಿಯಾಗಿರುವ ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ವಕ್ಫ್ ಬೋರ್ಡ್ ಆದೇಶ ಹೊರಡಿಸಿದೆ. ಆದರೆ, ಸುತ್ತೋಲೆಯಲ್ಲಿ ಅಝಾನ್ ಕೂಗುವುದಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ವಕ್ಫ್ ಬೋರ್ಡ್ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಮತ್ತು ಕರ್ನಾಟಕ ಮುಸ್ಲಿಂ ಜಮಾತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಫಿ ಸ ಅದಿ ಅವರು, ‘ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲ. ಸುತ್ತೋಲೆಯ ಕ್ರಮ ಸಂಖ್ಯೆ ಮೂರರಲ್ಲಿ ಸ್ಪಷ್ಟವಾಗಿ ಅಝಾನ್ ಮತ್ತು ಇತರ ಯಾವ ವಿಚಾರಗಳಿಗೆ ಧ್ವನಿವರ್ಧಕ ಬಳಸಬಹುದೆಂದು ಸ್ಪಷ್ಟಪಡಿಸಲಾಗಿರುತ್ತದೆ. 10-07-2017 ರಂದು ಆಗಿನ ವಕ್ಫ್ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ. ನಿರ್ಣಯದಲ್ಲಿ ಯಾವುದೇ ಲೋಪಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಸುತ್ತೋಲೆ ಹೊರಡಿಸಿದ್ದ ರಾಜ್ಯ ವಕ್ಫ್ ಬೋರ್ಡ್, ಶಬ್ದಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ತಡೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು. ಅಲ್ಲದೇ ಶಬ್ದಮಾಲಿನ್ಯದಿಂದ ಆರೋಗ್ಯದ ಮೇಲಷ್ಟೇ ಅಲ್ಲ, ಜನಸಾಮಾನ್ಯರ ಮನಸ್ಸಿನ ಮೇಲೆಯೂ ಗಂಭೀರ ಪರಿಣಾಮ ಬೀಳಲಿದೆ. ಆಸ್ಪತ್ರೆಗಳು, ನ್ಯಾಯಾಲಯ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ನಿಶ್ಯಬ್ದ ವಲಯಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಸೋದು ಪರಿಸರ ಸಂರಕ್ಷಣಾ ಕಾಯ್ದೆಯನ್ವಯ ದಂಡನಾರ್ಹ. ಈ ಹಿನ್ನೆಲೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಮಸೀದಿ ಹಾಗೂ ದರ್ಗಾಗಳಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಸಮಯಗಳಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಮನದಲ್ಲಿಟ್ಟು ಮೈಕ್ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿತ್ತು.

ಹಗಲಿನಲ್ಲಿ ಬಳಸುವ ಧ್ವನಿವರ್ಧಕ ಶಬ್ದಕ್ಕೆ ಸಂಬಂಧಿಸಿ ಸುತ್ತಲಿನ ಗಾಳಿಯ ಗುಣಮಟ್ಟದ ಆಧಾರದಲ್ಲಿ ಇರಬೇಕು. ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು. ಸಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್‌ಗಳನ್ನು ಬಳಸಬೇಕು. ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
10-07-2017 ರಂದು ಆಗಿನ ವಕ್ಫ್ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾ ಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ.
— Moulana Shafi Saadi (@shafi_saadi) March 16, 2021
ನಿರ್ಣಯದಲ್ಲಿ ಯಾವುದೇ ಲೋಪದೋಷಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು.
11-12-25 08:03 pm
HK News Desk
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 04:21 pm
Mangalore Correspondent
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am